ಮಳೆಗಾಲದಲ್ಲಿ ಸ್ಪಂದಿಸಲು ಅಧಿಕಾರಿಗಳ ತುರ್ತು ಸೇವಾ ತಂಡ ರಚನೆ; ಸಚಿವ ಪ್ರಿಯಾಂಕ್ ಖರ್ಗೆ

0
23

ಕಲಬುರಗಿ; ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದಾಗಿ, ಮಳೆಯ ಸಂಕಷ್ಟಕ್ಕೆ ಸಾರ್ವಜನಿಕರಿಗೆ ಸ್ಪಂದಿಸಲು ತುರ್ತು ಸೇವಾ ತಂಡ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ‌ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ‌ ಬಿಡುಗಡೆ ಮಾಡಿರುವ ಅವರು, ಮಳೆಗಾಲ ಪ್ರಾರಂಭವಾಗಿರುವುದರಿಂದ ತುರ್ತು ಸೇವಾ ತಂಡಗಳನ್ನು ರಚಿಸಲು ಮಹಾನಗರ ಪಾಲಿಕೆಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಅವರು ತರ್ತು ಸೇವೆಗಳಾದ ಪ್ರವಾಹ, ಮಳೇ ನೀರು ಎಲ್ಲೆಂದರಲ್ಲಿ ನಿಂತಿರುವುದು, ಮಳೆಯಿಂದಾಗಿ ಗಿಡಗಳು ಮುರಿದು ಬಿದ್ದ ಸಂದರ್ಭದಲ್ಲಿ ತೆರವುಗೊಳಿಸುವುದು, ವಿದ್ಯುತ್ ಸಂಪರ್ಕದ ಸಮಸ್ಯೆಗಳು ಹಾಗೂ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ವಾರ್ಡ್‍ವಾರು ಅಧಿಕಾರಿ/ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Contact Your\'s Advertisement; 9902492681

ತುರ್ತು ಸೇವೆಗೆ ನೇಮಕಗೊಂಡ ಅಧಿಕಾರ ವಿವರ ಹಾಗೂ‌ ಅವರ ಸಂಪರ್ಕ ದೂರವಾಣಿ ಸಂಖ್ಯೆಯನ್ನೂ ಕೂಡಾ ಹೊರಡಿಸಲಾಗದ ಆದೇಶದೊಂದಿಗೆ ಸಾರ್ವಜನಿಕರಿಗೆ ಒದಗಿಸಲಾಗುತ್ತಿದ್ದು. ತಮಗೆ ಏನಾದರೂ ತೊಂದರೆ ಎದುರಾದರೆ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಲು ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವಲಯ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಇಂಜೀನಿಯರ್ ಗಳು ಸಮನ್ವಯ ಸಾಧಿಸಿ ಯಾವುದೇ ರೀತಿಯ ತುರ್ತು ಪರಿಸ್ಥಿತಿಯಲ್ಲಿ ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಇತ್ಯರ್ಥಪಡಿಸುವುದು ಸೇರಿದಂತೆ ಮಳೆ ಬರುವ ಸಮಯದಲ್ಲಿಸಂಬಂಧಪಟ್ಟ ವಾರ್ಡ್‍ಗಳ ಸಹಾಯಕ/ಕಿರಿಯ ಅಭಿಯಂತರರು ಮತ್ತು ಆರೋಗ್ಯ ನಿರೀಕ್ಷಕರು ಕಡ್ಡಾಯವಾಗಿ ರಾತ್ರಿ ವೇಳೆ ತಮ್ಮ-ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಪರಿವೀಕ್ಷಣೆ ಮಾಡಿ, ದೂರು/ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here