ಕಲಬುರಗಿ : ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ದಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ನೇತ್ರತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತೆ ಜೀವ ಬಂದಂತಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಿತಾ ಪವನ್ ಕುಮಾರ ವಳಕೇರಿಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಧಾನಸಭೆ ಚುನಾವಣೆ ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಸತತ ಜಯಭೇರಿ ಬಾರಿಸುತ್ತಿರುವ ಕಾಂಗ್ರೆಸ್ ಪಕ್ಷ, ಈ ಭಾಗದಲ್ಲಿ ಖರ್ಗೆಯವರ ನಾಯಕತ್ವವನ್ನು ಎಲ್ಲರೂ ಮೆಚ್ಚಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ಖರ್ಗೆ ಅವರ ನಾಯಕತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಆಗಲಿದೆ ಮತ್ತು ಈ ಭಾಗದಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳು ಬರುವ ಸಾಧ್ಯತೆಗಳು ಕಂಡು ಬರುತ್ತಿದೆ ಎಂದು ಅವರು
ತಿಳಿಸಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಸರಕಾರವಿದ್ದರೂ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಎರಡನ್ನು ನಿಭಾಯಿಸುವುದರ ಜೊತೆಗೆ ಕಲ್ಯಾಣ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಕೊಡುಗೆಗಳು ಖರ್ಗೆಯವರ ನಾಯಕತ್ವದಲ್ಲಿ ಬರಲಿವೆ ಎಂದು ಅವರು ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಖರ್ಗೆ ಅವರಿಗೆ ಇನ್ನೂ ಉನ್ನತ ಸ್ಥಾನ ಸಿಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…