ಜೇವರ್ಗಿ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದ 1ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜೇವಗಿ೯ ತಾಲೂಕು ಮಡಿವಾಳ ಕಲ್ಯಾಣ ಸಂಘ ಹಾಗೂ ಕನಾ೯ಟಕ ರಣಧೀರ ಪಡೆ ಯಡ್ರಾಮಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಹಸೀಲ್ದಾರ್ ರವರ ಮುಖಾಂತರ ಮುಖ್ಶಮಂತ್ರಿಗಳಿಗೆ ಮನವಿ ಸಲ್ಲಿಸಿಲಾಯಿತು. ಒಂದನೇಯ ತರಗತಿಯ ವಿದ್ಯಾರ್ಥಿನಿ ಕುಮಾರಿ ರೂಪಾ ಮಡಿವಾಳ ಅವರನ್ನು ದಿನಾಂಕ 08-09-2019 ರಂದು ಸಂಜೆ 7 ಗಂಟೆಗೆ ಗ್ರಾಮದ ದೇವಸ್ಥಾನದಲ್ಲಿ ಆಟವಾಡುತ್ತಿರುವ ಬಾಲಕಿಯನ್ನು ದುಷ್ಕರ್ಮಿಗಳು ಚಾಕಲೇಟ್ ಆಸೆ ತೋರಿಸಿ ಅಪಹರಿಸಿಕೊಂಡು ಹೋಗಿದ್ದಾರೆ. ಅತ್ಯಾಚಾರವೆಸಗಿ ಕೊಲೆಗೈದು ಚೀಲದಲ್ಲಿ ಕಟ್ಟಿ ಎಸೆದು ಹೋಗಿರುತ್ತಾರೆ. ಕ್ರತ್ಶ ಎಸಗಿರುವ ದುಷ್ಕರ್ಮಿಗಳಿಗೆ ಆದಷ್ಟು ಬೇಗ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಕುಮಾರಿ ರೂಪಾ ಅವರ ಕುಟುಂಬಕ್ಕೆ ಸಕಾ೯ರದ ವತಿಯಿಂದ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಡಿವಾಳ ಸಮಾಜದ ತಾಲೂಕು ಅಧ್ಯಕ್ಷರಾದ ದೇವಿಂದ್ರಪ್ಪ ಮಡಿವಾಳ ಹಿಪ್ಪರಗಿˌ ಉಪಾಧ್ಯಕ್ಷರಾದ ಮಡಿವಾಳಪ್ಪ ಮಡಿವಾಳ ಎಸ್ ಮಳ್ಳಿ, ವಕೀಲರಾದ ಅಪ್ಪಾಸಾಬ ಮಡಿವಾಳ ಕೋಳಕೂರˌ ಕರ್ನಾಟಕ ರಣಧೀರ ಪಡೆಯ ಯಡ್ರಾಮಿ ತಾಲೂಕಿನ ಅಧ್ಯಕ್ಷ ಮಲ್ಲಿಕಾರ್ಜುನ ಬಿ ಕುಳಗೇರಿ ಮಡಿವಾಳ, ಬಸವರಾಜ ಮಡಿವಾಳ ಜೇವಗಿ೯, ಶಿವಕುಮಾರ ಮಡಿವಾಳ ವಡಗೇರಿ ಮತ್ತು ಸಮಾಜದ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…