ಶಹಾಬಾದ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಶುಕ್ರವಾರ ನಗರದ ನೆಹರು ವೃತ್ತದಲ್ಲಿ ಜಿಲ್ಲಾ ಕಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಡಾ.ರಶೀದ್ ಮರ್ಚಂಟ್ ಮಾತನಾಡಿ,ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ತನ್ನ ಚಾಪನ್ನು ಮೂಡಿಸಿದ ಬೆನ್ನಲ್ಲೆ, ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಎರಡನೇ ಬಾರಿ ಗೆಲುವು ದಾಖಲಿಸುವ ಮೂಲಕ ಕಾಂಗ್ರೆಸ್ ಭದ್ರಕೋಟೆಯಾಗಿ ನಿರ್ಮಾಣವಾಗಿದೆ. ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಸಂಘಟನೆಯಿಂದ ಇಂದು ಬಿಜೆಪಿ ಸಂಪೂರ್ಣ ನೆಲ ಕಚ್ಚಿದೆ.ಇನ್ನು ಪಕ್ಷವನ್ನು ಗಟ್ಟಿಯಾಗಿ ಕಟ್ಟುವುದರ ಮೂಲಕ ಖರ್ಗೆ ಅವರಿಗೆ ಕೈ ಜೋಡಿಸೋಣ.ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನಮನ್ನಣೆ ಪಡೆಯಲಿದೆ. ನಮ್ಮದು ನುಡಿದಂತಡ ನಡೆಯುವ ಸರಕಾರವಾಗಿದೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡ ಆನಂದ ಪಾಟೀಲ, ಶರಣಗೌಡ ಪಾಟೀಲ ಗೋಳಾ(ಕೆ), ಮೃತ್ಯುಂಜಯ್ ಹಿರೇಮಠ, ಅಭಿಷೇಕ ಪಾಟೀಲ, ಪೀರಪಾಶಾ, ಕಿರಣ ಚವ್ಹಾಣ, ಸೂರ್ಯಕಾಂತ ಕೋಬಾಳ, ನಾಗಣ್ಣ ರಾಂಪೂರೆ, ಅನ್ವರ್ ಪಾಶಾ,ಡಾ.ಅಹ್ಮದ್ ಪಟೇಲ್, ಮಹ್ಮದ್ ಜಹೀರ್ ಪಟವೇಗರ್, ಮಹ್ಮದ್ ಮಸ್ತಾನ್, ಮಹ್ಮದ್ ಅಜರೋದ್ದಿನ್, ಮಹ್ಮದ್ ಇಮ್ರಾನ್,ಮರಲಿಂಗ ಕಮರಡಗಿ, ಶಂಕರ ಕೋಟನೂರ್,ನಿಂಗಣ್ಣ ಪೂಜಾರಿ,ರಮೇಶ ಪವಾರ,ಮೆಹಬೂಬ ಮದ್ರಿ, ಶೇರ್ ಅಲಿ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…