ಸುರಪುರ: ಶೋಷಿತ ಸಮುದಾಯಗಳ ಏಳಿಗೆಗಾಗಿ ಅವಿರತ ಹೋರಾಟ ಮಾಡಿರುವ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರಿಗೆ ಸರಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ವಿಭಾಗೀಯ ಪ್ರಧಾನ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ದಲಿತ ಚೇತನ ಬಿ.ಕೃಷ್ಣಪ್ಪ ಅವರು ಭದ್ರಾವತಿಯಿಂದ ಆರಂಭ ಮಾಡಿದ ದಲಿತ ಚಳವಳಿ ಕರ್ನಾಟಕದ ಉದ್ದಗಲಕ್ಕೂ ವ್ಯಾಪಿಸಿ ಲಕ್ಷಾಂತರ ತಳ ಸಮುದಾಯದ ಬಡವರ ವಿಮೋಚನೆಗಾಗಿ ದಲಿತ ಸಂಘರ್ಷ ಸಮಿತಿ ಹೋರಾಟ ಮಾಡುತ್ತಾ ಬಂದಿದೆ.ಬಿ.ಕೃಷ್ಣಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಸರಳ ಜೀವನ ನಡೆಸಿ ರಾಜಕೀಯವಾಗಿ ಶೋಷಿತರು ಸಬಲರಾಗಬೇಕೆನ್ನುವ ಕನಸು ಹೊಂದಿದ್ದರು.
ಜಾತಿಯತೆ,ಅಸ್ಪøಶ್ಯತೆ,ವರ್ಗ ಸಮಾನತೆಗಳ ವಿರುದ್ಧ ಹೋರಾಟ ರೂಪಿಸಿದರು.ಅಂದು ಅವರು ಮಾಡಿದ ಹೋರಾಟದ ಫಲವಾಗಿ ಇಂದು ದಲಿತ ಶೋಷಿತ ಸಮುದಾಯದವರಿಗೆ ಅಲ್ಪಸ್ವಲ್ಪ ಭೂಮಿ ಸಿಕ್ಕಿದೆ ಎಂದರೆ ಅದು ಬಿ.ಕೃಷ್ಣಪ್ಪನವರ ಹೋರಾಟದ ಫಲವಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಪ್ರೋ.ಬಿ.ಕೃಷ್ಣಪ್ಪನವರ 88ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರೋ.ಬಿ.ಕೆ ಸಂಘರ್ಷ ದಿನ ಎಂದು ಜೂನ್ 9 ರಂದು ಆಚರಿಸಲಾಗುತ್ತಿದೆ.ಬಿ.ಕೆ ಸಂಘರ್ಷ ದಿನವನ್ನು ಇದೇ ಜೂನ್ 9 ರಂದು ಬೆಂಗಳೂರಿನ ಪುರಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಪ್ರೋ.ಬಿ.ಕೃಷ್ಣಪ್ಪ ಟ್ರಸ್ಟ್, ಅಧ್ಯಕ್ಷ ಇಂದಿರಾ ಕೃಷ್ಣಪ್ಪ,ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ,ನಾಗಣ್ಣ ಬಡಿಗೇರ,ರಮೇಶ ಡಾಕುಳಕಿ,ಎನ್.ನಾಗರಾಜ,ಕಾರಳ್ಳಿ ಶ್ರೀನಿವಾಸ,ವಿರೇಶ ಹಿರೇಹಳ್ಳಿ ಮತ್ತು ಜಿಲ್ಲಾ,ತಾಲೂಕು ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದು ಕಲಬುರ್ಗಿ ವಿಭಾಗದ ಪ್ರತಿ ಜಿಲ್ಲೆಯಿಂದ ಎರಡು ನೂರಕ್ಕೂ ಹೆಚ್ಚು ಜನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದ್ದರಿಂದ ನಮ್ಮ ಸಂಘಟನೆಯ ಕಾರ್ಯಕರ್ತರು ಹಾಗೂ ಪ್ರೋ.ಬಿ.ಕೃಷ್ಣಪ್ಪ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…