ಬೀದರ್: ಇಲ್ಲಿನ ಲಿಂಗಾಯತ ಮಹಾಮಠ ಹಾಗೂ ಬಸವ ಸೇವಾ ಪ್ರತಿಷ್ಠಾನದ ಸಹಯೋಗದಲ್ಲಿ ನಗರದ ಶರಣ ಉದ್ಯಾನದಲ್ಲಿ ಸೆ.23ರಂದು ಸಂಜೆ 6 ಗಂಟೆಗೆ ಬಸವ ಭೂಮಿ ಯಾತ್ರೆ-ಶರಣ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿ ಯೋಗಿಣಿ ಅಕ್ಕನಾಗಲಾಂಬಿಕಾ ಸೇವಾಶ್ರಮ ಹಾಗೂ ಬಸವ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.
ಅಕ್ಕ ಅನ್ನಪೂರ್ಣ ತಾಯಿ ಹಾಗೂ ಡಾ. ಗಂಗಾಂಬಿಕಾ ಪಾಟೀಲ ಅಕ್ಕ ಸಾನ್ನಿಧ್ಯದಲ್ಲಿ ನಡೆಯಲಿದ್ದು, ನೂತನ ಸಚಿವರಾದ ಪ್ರಭು ಚವ್ಹಾಣ, ಶಶಿಕಲಾ ಜೊಲ್ಲೆ, ಲೋಕಸಭೆ ಸದಸ್ಯರಾದ ಭಗವಂತ ಖೂಬಾ, ಅಪ್ಪಾಸಾಹೇಬ ಜೊಲ್ಲೆ ಅವರನ್ನು ಅಭಿನಂದಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾರೋಗೇರಿಯ ಶರಣ ವಿಚಾರ ವಾಹಿನಿಯ ಅಧ್ಯಕ್ಷ ಐ.ಆರ್. ಮಠಪತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶೈಲೇಂದ್ತ ಬೆಲ್ದಾಳೆ ಧ್ವಜಾರೋಹಣ ಮಾಡಲಿದ್ದಾರೆ. ಭಾರತೀಯ ಬಸವ ಬಳಗದ ಅಧ್ಯಕ್ಷ ಬಾಬು ವಾಲಿ, ಬೆಳಗಾವಿ ಬಸವ ಭೂಮಿ ಯಾತ್ರೆಯ ಎಸ್.ಎಲ್. ಬಾಡಗಿ ಗೌರವ ಉಪಸ್ಥಿತಿ ಇರಲಿದ್ದಾರೆ.
ಉದ್ಯಮಿ ಜಯರಾಜ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದ್ದಾರೆ.
ವನಿತಾ ಗುಂಡಪ್ಪ ಬಳತೆ, ಶೋಭಾ ಪ್ರಭಾಕರ ಸಿಂಧೋಲ ದಾಸೋಹಿಗಳಾಗಿದ್ದು, ಶಿವಕುಮಾರ ಪಾಂಚಾಳ ಮತ್ತು ತಂಡದವರು ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…