ಕಲಬುರಗಿ: ಎನ್.ಡಿ.ಎ ಅಭ್ಯರ್ಥಿಯಾಗಿ ಮಂಡ್ಯ ದಿಂದ ಸ್ಪರ್ದಿಸಿ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಸಂಸದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾ ಸಂಸದರಾಗಿ ಆಯ್ಕೆ ಆಗಿರುವ ಡಾ. ಸಿ.ಎನ್ ಮಂಜುನಾಥ ಅವರಿಗೆ ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಅಭಿನಂದನೆ ಸಲ್ಲಿಸಿದ್ದಾರೆ.
ದೇಹಲಿಯಲ್ಲಿ ಶುಕ್ರವಾರ ರಾತ್ರಿ ಬೇಟಿ ಯಾಗಿ ಶುಭಕೋರಿ ಎನ್.ಡಿ. ಎ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯ ಜೊತೆಗೆ ಕಲಬುರಗಿ ಜಿಲ್ಲೆಯ ಅಭಿವೃದ್ದಿಗೂ ಹೆಚ್ಚಿನ ಆದ್ಯತೆ ನೀಡಲು ಹೆಚ್.ಡಿ.ಕೆ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಾಸಿರ ಹುಸೇನ್ ಉಸ್ತಾದ, ಶಿವಕುಮಾರ್ ಪಾಟೀಲ್ ತೇಲ್ಕೂರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.