ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲಟ್ ಘೋಷಣೆ ಮಾಡಲಾಗಿದ್ದು ಶುಕ್ರವಾರ ಸುರಿದ ಮಳೆಗೆ ಸೇಡಂ ಪೊಲೀಸ್ ಠಾಣೆ ಜಲಾವೃತಗೊಂಡು ದಾಖಲೆಗಳನ್ನು ರಕ್ಷಿಸಲು ಪೊಲೀಸ್ ಸಿಬ್ಬಂದಿ ಪರದಾಟುವ ಸ್ಥಿತಿ ನಿರ್ಮಾಣವಾಗಿದೆ.
ಮಳೆಯ ಅರ್ಭಟಕ್ಕೆ ಠಾಣೆ ಆವರಣ ಮಾತ್ರವಲ್ಲದೇ ಠಾಣೆ ಒಳಗೂ ನೀರು ನುಗ್ಗಿದೆ. ಪೊಲೀಸ್ ಸಿಬ್ಬಂದಿ ನೀರು ಹೊರ ಹಾಕುವ ಕೆಲಸದಲ್ಲಿ ನಿರತರಾಗಿದ್ದಾರೆ. ಠಾಣೆ ಒಳಗೆ, ಹೊರಗೆ ಹೋಗಲು ಪೊಲೀಸ್ ಸಿಬ್ಬಂದಿ ಪರದಾಟ ನಡೆಸಿದ್ದಾರೆ.
ಪ್ರತಿ ಬಾರಿ ಭಾರೀ ಮಳೆ ಬಂದಾಗ ಠಾಣೆಗೆ ಮಳೆ ನೀರು ನುಗ್ಗುತ್ತದೆ. ತಗ್ಗು ಪ್ರದೇಶದಲ್ಲಿರುವ ಕಾರಣ ಮಳೆ ಬಂದಾಗ ನೀರು ನುಗ್ಗಿ ಪೊಲೀಸರಿಗೆ ಸಮಸ್ಯೆ ಉಂಟು ಮಾಡುವುದರಿಂದ ಕೆಲಸ ಮಾಡುವುದಕ್ಕೆ ಸಾಕಷ್ಟು ಸಮಸ್ಯೆಗಳು ಪೊಲೀಸರು ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.