ಕಾಳಗಿ: ಬೀಜ, ಗೊಬ್ಬರ ವ್ಯಾಪಾರಿಗಳ ಶೋಷಣೆಯನ್ನು ತಡೆಯುವಂತೆ ಹಾಗೂ ಬಿತ್ತನೆ ಬೀಜ ಹಾಘೂ ರಸಗೊಬ್ಬರಗಳ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ರಸ್ತೆ ತಡೆ ಚಳುವಳಿ ಮಾಡಿದರು.
ಸಂಘದ ಕಲಬುರ್ಗಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರಮೇಶ್ವರ್ ಕಾಂತಾ, ದಿಲೀಪ್ ನಾಗೂರೆ, ಸಿದ್ದಪ್ಪ ಕಲಶೆಟ್ಟಿ, ತುಳಜಪ್ಪಾ ಮೋಘಾ, ಗುಂಡಪ್ಪ ಅರಣಕಲ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ತಹಸಿಲ್ದಾರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ, ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಸಲು ಒತ್ತಾಯಿಸಿ, ನಕಲಿ -ಕಳಪೆ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಕಳಪೆ ಹಾಗೂ ನಕಲಿ ಬಿತ್ತನೆ ಬೀಜ -ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟುವಂತೆ, ಕೃತಕ ಅಭಾವ ಸೃಷ್ಟಿಸಿ ಕಾಳಸಂತೆ ಮಾರಾಟದ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ,
ಬಲವಂತದ ಸಾಲ ವಸೂಲಾತಿ ನಿಲ್ಲಿಸುವಂತೆ, ಬರ ಪರಿಹಾರದ ಹಣವನ್ನು ಸಾಲಕ್ಕೆ ಕಟಾಯಿಸಿಕೊಳ್ಳದೇ ಇರುವಂತೆ, ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟುವಂತೆ, ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸುವಂತೆ ಮತ್ತು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸುವಂತೆ ಒತ್ತಾಯಿಸಿದರು.
ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸಿತ್ತು. ಯಾವುದೇ ಅರ್ಥ ಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ-ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆ ಮಾರಾಟವನ್ನು ತಡೆಗಟ್ಟುವಂತೆ, ಬಲವಂತದ ಸಾಲವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸುವಂತೆ, ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸುವಂತೆ ಅವರು ಒತ್ತಾಯಿಸಿದರು.
ಬೆಣ್ಣೆ ತೊರಾ ಜಲಾಶಯ ಮತ್ತು ಗಂಡೊರಿ ನಾಲಾ ಜಲಾಶಯ ಮೂಲಕ ನೀರು ಹರಿಸುವ ಮೆನ್ ಕ್ಯಾನಲ್ ಕಾಲುವೆ ಹೊದ ರೈತರ ಜಮೀನು ಸರ್ವೇ ನಂಬರ್ ಎಕರೆ ಗುಂಟೆ ಜಮೀನು ಹೊದ ರೈತರು ಹೊರತುಪಡಿಸಿ ಕ್ಯಾನಲ್ ಕಾಲುವೆಗೆ ಸಂಬಂದ ಇರಲಾರದ ರೈತರ ಜಮೀನು ರೈತರ ಪಹಣಿಯಲ್ಲಿ ಇರುವ ಜಮೀನು ತೆಗೆದು ಹಾಕಿ ರೈತರಿಗೆ ಅನ್ಯಾಯ ಮಾಡಿದ ಎಸ್‍ಎಲ್ಲೊ ಮತ್ತು ಸರ್ವೇ ಜಮೀನು ಅಳತೆ ಅಧಿಕಾರಿಗಳು ಅದಕ್ಕೆ ಸಂಬಂಧಿಸಿದ ನೀರಾವರಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಮೇಲೆ ಕಾನೂನಿನ ಪ್ರಕಾರ ಕ್ರಮ ಜರುಗಿಸಿ ಅನ್ಯಾಯಕ್ಕೆ ಒಳಗಾದ ರೈತರ ಪಹಣಿಯಲ್ಲಿ ತೆಗೆದ ಜಮೀನು ರೈತರಿಗೆ ಸರಿಪಡಿಸಿ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಸರಿಯಾದ ಸಮಯಕ್ಕೆ ವೇತನ ಕೊಡುವಂತೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೆಲಸ ಕೇಳಿದ ಕೂಲಿಕಾರರಿಗೆ ಸರಿಯಾದ ಸಮಯಕ್ಕೆ ಕೆಲಸ ಒದಗಿಸುವಂತೆ, ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಮೀಟರ್ ಆರ್‍ಆರ್ ನಂಬರ್ ನೊಂದಾಯಿಸುವುದು ತಡೆಹಿಡಿದು ವಿದ್ಯುತ್ ಕಲ್ಪಿಸುವ ಅಕ್ರಮ ಸಕ್ರಮ ರದ್ದು ಮಾಡಿ ಪಂಪ್ ಸೆಟ್ ರೈತರ ಹಣ ಕಟ್ಟಿ ಕಂಬಾ, ವೈಯರ್ ಟಿಸಿ (ಟ್ರಾನ್ಸ್ ಫಾರ್ಮರ್ ಕೂಡಿಸುವುದು) ವಿರೋಧಿ ಆದೇಶ ಹಿಂಪಡೆದು, ಮೊದಲಿನಂತೆ ಪಂಪ್ ಸೆಟ್ಟಗಳಿಗೆ ಸರಳವಾಗಿ ವಿದ್ಯುತ್ ಸಂಪರ್ಕ ಕೊಡುವಂತೆ ಅವರು ಒತ್ತಾಯಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…