ಕಲಬುರಗಿ: ಈ ನೆಲದ ಭಾಷೆ, ಸಂಸ್ಕøತಿ ರಕ್ಷಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕ್ರಿಯಾಶೀಲ ಗೆಳೆಯರ ಬಳಗದ ಜಂಟಿ ಆಶ್ರಯದಲ್ಲಿ ಜೂನ್ 11 ರಂದು ನಗರದ ಕನ್ನಡ ಭವನದ ಪ್ರಾಂಗಣದಲ್ಲಿರುವ ಸಾಹಿತ್ಯ ಮಂಟಪದಲ್ಲಿ ವಿಶೇಷ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನೊಳಗೊಂಡ ಸಾಹಿತ್ಯ ಸಂಸ್ಕøತಿ ಉತ್ಸವ-2024 ಭಾಷೆ-ಸಂಸ್ಕøತಿ-ಕಲೆಯ ಸಂಭ್ರಮ ವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.
ಗರದ ಕನ್ನಡ ಭವನದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ವಿವರ ನೀಡಿದ ತೇಗಲತಿಪ್ಪಿ, ಬದುಕಿನ ಮೆಟ್ಟಿಲುಗಳು ಯಶಸ್ವಿಯಾಗಬೇಕಾದರೆ ಕಲೆ, ಸಾಹಿತ್ಯ, ಸಂಗೀತ, ಉತ್ಸವಗಳು ಉತ್ತಮ ಪರಿಣಾಮ ಬೀರಲಿವೆ. ಈ ಹಿನ್ನೆಲೆಯಾಗಿ ಜನ ಸಾಮಾನ್ಯರ ಜೀವನಮಟ್ಟ ಸುಧಾರಿಸಲು ಇಂಥ ಕಾರ್ಯಕ್ರಮಗಳು ಪೂರಕವಾಗಲಿವೆ.
ಕಳೆದ ಎರಡೂವರೆ ವರ್ಷಗಳಿಂದ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜಿಲ್ಲೆಯನ್ನು ಸಾಂಸ್ಕøತಿಕ ವಲಯವನ್ನಾಗಿಸುವ ಪ್ರಯತ್ನದ ಹಾದಿಯಲ್ಲಿದ್ದೇವೆ ಎಂದು ಅವರು ವಿವರಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯ ವಹಿಸಿ ತಮ್ಮ ತಮ್ಮ ಕಾಲಾವಧಿಯಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿರುವ, ಜಿಲ್ಲೆಯ ಹಿಂದಿನ ಎಲ್ಲಾ ಜಿಲ್ಲಾಧ್ಯಕ್ಷರುಗಳ ಬದುಕು ಮತ್ತು ಬರಹಗಳನ್ನೊಳಗೊಂಡಿರುವ ಕನ್ನಡ ಸಾರಥಿ ಎನ್ನುವ ಕಸಾಪ ಜಿಲ್ಲಾಧ್ಯಕ್ಷರ ಪರಿಚಯಾತ್ಮಕ ಕೃತಿಯೊಂದನ್ನು ಸಹ ಇದೇ ಸಂದರ್ಭದಲ್ಲಿ ಜನಾರ್ಪಣೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಜೂನ್ 11 ರಂದು ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದಲ್ಲಿ ಖ್ಯಾತ ಚಿತ್ರಕಲಾವಿದ ಡಾ. ರೆಹಮಾನ್ ಪಟೇಲ್ ಅವರ ನೇತೃತ್ವದಲ್ಲಿ ಜಿಲ್ಲೆಯ 45 ಜನ ಉದಯೋನ್ಮುಖ ಕಲಾವಿದರ ಚಿತ್ರಕಲಾ ಪ್ರದರ್ಶನ ಜರುಗಲಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಡಾ. ಬಸವರಾಜ ಜಾನೆ ಅವರು ಚಾಲನೆ ನೀಡಲಿದ್ದು, ಪ್ರಮುಖರಾದ ಜಗನ್ನಾಥ ಎಲ್ ತರನಳ್ಳಿ, ಜಗದೀಶ ಮರಪಳ್ಳಿ, ಮಲ್ಲಿನಾಥ ಪಾಟೀಲ ಕಾಳಗಿ, ವಿದ್ಯಾಸಾಗರ ದೇಶಮುಖ, ಶಿವರಾಜ ಅಂಡಗಿ ಸೇರಿದಂತೆ ಅನೇಕರು ಉಪಸ್ಥಿತರಿರುವರು.
ಸಾಯಂಕಾಲ 4.15 ಕ್ಕೆ ನಡೆಯುವ ಸಾಹಿತ್ಯ ಸಂಸ್ಕøತಿ ಉತ್ಸವ-2024 ನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ ಸೋಮಶೇಖರ ಅವರು ಉದ್ಘಾಟಿಸಲಿದ್ದು, ಸಾರಂಗಮಠದ ಜಗದ್ಗುರು ಶ್ರೀ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷರ ಪರಿಚಯಾತ್ಮಕ ದ ಕನ್ನಡ ಸಾರಥಿ ಕೃತಿಯನ್ನು ಚಿತ್ತಾಪೂರಿನ ಸಹಕಾರಿ ಧುರೀಣ ನಾಗರೆಡ್ಡಿ ಪಾಟೀಲ ಕರದಾಳ ಜನಾರ್ಪಣೆಗೊಳಿಸಲಿದ್ದು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ, ಡಿಸಿಸಿ ಬ್ಯಾಂಕಿನ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಿ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಎಸ್ ಪಾಟೀಲ, ಸಾಹಿತ್ಯ ಪ್ರೇರಕಿ ಲಕ್ಷ್ಮೀ ದತ್ತಾತ್ರೇಯ ಪಾಟೀಲ ರೇವೂರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸೇಡಮ್‍ನ ಶ್ರಾವಣಿ ಭರತನಾಟ್ಯ ಕಲಾವಿದರ ಸಂಘ, ಕು. ಶೃತಿ ಚರಂತ್ರಿಮಠ, ಆವಂತಿಕಾ ಬಿ ಘಂಟೆ ಸೇರಿದಂತೆ ಮುಂತಾದವರಿಂದ ಗಾನ ನೃತ್ಯ ಸಂಭ್ರಮ ಜರುಗಲಿದೆ. ಸಮಾಜದ ವಿವಿಧ ಕ್ಷೇತ್ರದ ಪ್ರಮುಖರಿಗೆ ಗೌರವ ಪುರಸ್ಕಾರ ನಡೆಯಲಿದೆ.
ಹತ್ತನೇ ಹಾಗೂ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಪ್ರತಿಶತ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಲಿದ್ದು, ಆಸಕ್ತ ವಿದ್ಯಾರ್ಥಿಗಳು ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ – ಮೊ. 98865 60869 ಗೆ ಸಂಪರ್ಕಿಸಿ ಹೆಸರು ನೋಂದಾಯಿಸಲು ಕೋರಿದೆ.
ಸಂಸ್ಕøತಿ ಸಂವರ್ಧನೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸತೊಂದನ್ನು ಕಟ್ಟುವ ಕನಸಿದೆ. ಸಮಾಜದ ಏರುಪೇರುಗಳನ್ನು ಸರಿಪಡಿಸುವ ಹಂಬಲವಿದೆ. ಸರ್ವರನ್ನು ಮತ್ತು ಇಂದಿನ ಸಮಾಜವನ್ನು ವೈಚಾರಿಕತೆಯ ಪಥದಲ್ಲಿ ಕರೆದೊಯ್ಯುವ ಆಸೆಯಿದೆ. ಈ ನಿಟ್ಟಿನಲ್ಲಿ ಪರಿಷತ್ತು ಸದಾ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. – ವಿಜಯಕುಮಾರ ಪಾಟೀಲ ತೇಗಲತಿಪ್ಪಿ. ಕಸಾಪ ಜಿಲ್ಲಾಧ್ಯಕ್ಷ.
ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಕಲ್ಯಾಣಕುಮಾರ ಶೀಲವಂತ, ಧರ್ಮಣ್ಣ ಎಚ್ ಧನ್ನಿ, ಶರಣರಾಜ್ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಶ್ರೀಕಾಂತಗೌಡ ತಿಳಗೂಳ, ಡಾ. ರೆಹಮಾನ್ ಪಟೇಲ್, sಸಂತೋಷ ಕುಡಳ್ಳಿ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…