ಪತ್ರಿಕಾ ಪ್ರಕಟಣೆ
ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಜೂನ್ 9 ರಂದು ರೆಡ್ ಅಲರ್ಟ್ ಹಾಗೂ ಜೂನ್ 10 ಹಾಗೂ 11 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತ ಬಾಂಧವರು ಮುಂಜಾಗ್ರತೆ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದ ಭಾರತೀಯ ಹವಾಮಾನ( ನಾಳೆ )ಜೂನ್ 09 ರಂದು ರೆಡ್ ಅಲರ್ಟ್ ಹಾಗೂ ಜೂನ್ 10 ಹಾಗೂ 11 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ, ರೈತರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ವಹಿಸಬೇಕು. ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಎಚ್ಚರಿಕೆಯಲ್ಲಿ ಬದಲಾವಣೆಯಾಗುತ್ತಿರುತ್ತದೆ.ಹಾಗಾಗಿ, ರೈತರು ಹಾಗೂ ಸಾರ್ವಜನಿಕರು ಬದಲಾಗುತ್ತಿರುವ ಎಚ್ಚರಿಕೆಯನ್ನು ಕೂಡಾ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಮಳೆಯಿಂದ ಹಾನಿಯಾಗುವ ಸಾಧ್ಯತೆಗಳು: ಸ್ಥಳೀಯವಾಗಿ ಇಳಿಜಾರು ಪ್ರದೇಶಗಳಲ್ಲಿ ಹೆಚ್ಚು ನೀರು ತುಂಬಿಕೂಳ್ಳುವ/ ಕೆಳ ಹಂತದ ರಸ್ತೆಗಳು ನೀರಿನಿಂದ ಮುಳುಗುವ ಸಾಧ್ಯತೆ ಇರುತ್ತದೆ, ರೈಲ್ವೆ/ರಸ್ತೆಯ ಕೆಳಸೇತುವೆ(Under pass) ಮುಳುಗಡೆಯಾಗಿ ರಸ್ತೆ ಬಂದಾಗುವ ಸಾದ್ಯತೆ ಇರುತ್ತದೆ. ಅತೀ ಹೆಚ್ಚಿನ ಮಳೆ ಇರುವುದರಿಂದ ವಾಹನ ಸವಾರರಿಗೆ ರಸ್ತೆ ಕಾಣದೇ ಇರುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಳೆಯಿಂದ ರಸ್ತೆಗಳು ನೀರಿನಿಂದ ತುಂಬಿಕೊಳ್ಳುವ ಕಾರಣ ಕಲಬುರಗಿ ನಗರ/ಪಟ್ಟಣ ಪ್ರದೇಶದಲ್ಲಿ ವಾಹನದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಮಳೆ ನೀರಿನಿಂದ ರಸ್ತೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ಅಪಾಯದಲ್ಲಿರುವ ಹಳೆ ಕಟ್ಟಡಗಳು ಕುಸಿಯುವ ಸಾಧ್ಯತೆಯಿರುತ್ತದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಕೆಸರುಗದ್ದೆಯಾಗುವ ಸಾಧ್ಯತೆ ಇರುತ್ತದೆ.
ಹೆಚ್ಚಿನ ಮಳೆಯಿಂದ ನದಿಯ ಪ್ರವಾಹ ಅಗುವ ಸಾಧ್ಯತೆ ಇರುತ್ತದೆ. ಗುಡುಗು, ಮಿಂಚು ಸಹಿತ ಸಿಡಿಲು ಬೀಳುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ತೆಗೆದುಕೂಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳು: ವಾಹನ ಸವಾರರು ಅತೀ ಹೆಚ್ಚು ನೀರು ಬರುವ ಪ್ರದೇಶದ ಕಡೆಗೆ ಅಥವಾ ನದಿ ದಡಗಳಲ್ಲಿ ಸಂಚರಿಸಬಾರದು. ಸಂಚಾರಿ ನಿಯಮಗಳನ್ನು ಅನುಸರಿಸುವುದು. ಹೆಚ್ಚು ನೀರು ತುಂಬಿಕೊಳ್ಳುವ, ಕೆಳ ಹಂತದ ಹಾಗೂ ಇಳಿಜಾರು ಪ್ರದೇಶದಲ್ಲಿ ವಾಸಿಸುವವರು ಸುರಕ್ಷತೆ ಸ್ಥಳಗಳಿಗೆ ಸ್ಥಳಾಂತರಗೊಳ್ಳುವುದು.
ಹಳೆಯ ಕಟ್ಟಡ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸಬಾರದು. ಸಿಡಿಲು ಬೀಳುವ ಸಂಭವವಿರುವುದರಿಂದ ದನಕರಗಳನ್ನು ಸುರಕ್ಷಿತವಾಗಿರಿಸುವುದು ಹಾಗೂ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಬಾರದು.
ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದ ಹಾಗೆ ಮುನ್ನಚ್ಚರಕೆವಹಿಸುವುದು.
ನಿರಂತರ ಮಳೆಯಿಂದ ಅಪಾಯದಲ್ಲಿರುವ ಹಳೆಯ ಮನೆ ಗೋಡೆಗಳು ಹಾಗೂ ಇತರೆ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಸುರಕ್ಷತೆಯ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವುದು.
ತೋಟಗಾರಿಕೆ ಬೆಳೆಗಳು ಹಾಗೂ ಇತರೆ ಬೆಳೆಗಳು ಹೆಚ್ಚಿನ ಮಳೆಯಿಂದ ನೀರು ನಿಂತು ಬೆಳೆ ಹಾಳಾಗುವ ಸಾಧ್ಯತೆ ಇರುತ್ತದೆ. ಬಸಿಗಾಲುವೆಗಳ ಮೂಲಕ ನೀರನ್ನು ಜಮೀನುಗಳಿಂದ ಹೊರಹಾಕಬೇಕು ಎಂದು ಸಚಿವರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…