ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಕೊಳ್ಳಲು ದೆಹಲಿಗೆ ತೆರಳಿದ ಬಿಜೆಪಿಯ ಮುಖಂಡರಾದ ಡಾ. ಉಮೇಶ್ ಜಾಧವ್ ಬಿಜೆಪಿಯ ಹಿರಿಯ ನಾಯಕರಾದ ಪ್ರಲ್ಹಾದ ಜೋಶಿ, ಜೆಡಿಎಸ್ ನ ನಾಯಕ ಹಾಗೂ ಮಂಡ್ಯದ ನೂತನ ಸಂಸದ ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ನೂತನ ಸಂಸದರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ದೆಹಲಿಗೆ ತೆರಳಿದ ಡಾ. ಉಮೇಶ್ ಜಾಧವ್ ಅವರು ಶನಿವಾರ ಪ್ರಲ್ಹಾದ ಜೋಷಿ ಯವರನ್ನು ಸ್ವಗೃ ಹದಲ್ಲಿ ಭೇಟಿಯಾಗಿ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಸ್ಪರ್ಧೆ ನೀಡಿದ ನೀವು ಕನಿಷ್ಠ ಮತಗಳ ಅಂತರದಿಂದ ಸೋಲುಂಡರೂ ನಿಜಾರ್ಥದಲ್ಲಿ ನೀವು ಉತ್ತಮ ಸಾಧನೆ ಮಾಡಿದ್ದೀರಿ. ಸೋಲನ್ನು ಮನಸ್ಸಿಗೆ ಹಚ್ಚಿಕೊಳ್ಳದೆ ನಿಮ್ಮೊಂದಿಗೆ ಸದಾ ಜೊತೆಗಿರುತ್ತೇವೆ ಹಾಗೂ ನೀವು ಕಲಬುರ್ಗಿ ಸೇರಿದಂತೆ ನಾಡಿನ ಅಭಿವೃದ್ಧಿಗಾಗಿ ಸಲಹೆಗಳನ್ನು ನೀಡಬೇಕು. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಕೇಂದ್ರ ಸರ್ಕಾರದಿಂದ ಪೂರ್ಣ ಸಹಕಾರ ಕೊಡಿಸುವುದಾಗಿ ಪ್ರಲ್ಹಾದ ಜೋಷಿ ಯವರು ಜಾಧವ್ ರವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ನಂತರ ಜೆಡಿಎಸ್ ಮುಖಂಡರಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ತಮಗೆ ಶುಭವಾಗಲಿ ಮತ್ತು ಕರ್ನಾಟಕದ ಜನತೆಗೆ ನಿಮ್ಮ ಸೇವೆ ಪೂರ್ಣ ಪ್ರಮಾಣದಲ್ಲಿ ಸಿಗುವಂತಾಗಲಿ ಎಂದು ಜಾಧವ್ ಹೇಳಿ ಹೂಗುಚ್ಚ ನೀಡಿ ಗೌರವಿಸಿ ಶುಭ ಹಾರೈಸಿದರು.
ಬಳಿಕ ಮಾಜಿ ಮುಖ್ಯಮಂತ್ರಿಗಳಾಗದ ಹಾವೇರಿ ಸಂಸದರಾದ ಬಸವರಾಜ್ ಬೊಮ್ಮಾಯಿ , ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್, ಚಿತ್ರದುರ್ಗ ಸಂಸದರಾದ ಗೋವಿಂದ ಕಾರಜೋಳ, ಮಂಗಳೂರು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೋಲಾರದ ಸಂಸದರಾದ ನಾಗೇಶ್ ಬಾಬು ಅವರನ್ನು ಪುಷ್ಪ ಗುಚ್ಛ ನೀಡಿ ಜಾಧವ್ ಸನ್ಮಾನಿಸಿದರು.
ನೂತನವಾಗಿ ಆಯ್ಕೆಗೊಂಡ ಎಲ್ಲಾ ಸಂಸದರು ಕಲ್ಬುರ್ಗಿ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ದುಡಿಯಲು ಶಕ್ತಿ ನೀಡಲಿ ಎಂದು ಜಾಧವ್ ಶುಭ ಹಾರೈಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…