ಕಲಬುರಗಿ: ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ಕಟಾವು, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ಬೆಳೆ ರಾಶಿನಂತರ ಹಾನಿ ಪ್ರಕರಣಗಳಲ್ಲಿ ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರೂ. ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳೆಗೆ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ 94.558 ಕೋಟಿ ರೂ., ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ 6.242 ಕೋಟಿ ರೂ. ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ (Post Harvest Losses) ಘಟಕದಡಿ 382 ರೈತರ ಬ್ಯಾಂಕ ಖಾತೆಗೆ 81.927 ಲಕ್ಷ ರೂ. ವಿಮೆ ಮೊತ್ತ ಪಾವತಿಸಲಾಗಿದೆ.
ಹೀಗೆ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ಪರಿಹಾರ ಹಣ ಖಾತೆಗೆ ಜಮೆ ಪ್ರಕ್ರಿಯೆ ಕಳೆದೆರಡು ದಿನಗಳಿಂದ ನಿರಂತರ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಉಳಿದ ರೈತರ ಖಾತೆಗೂ ಹಣ ಜಮೆಯಾಗಲಿದೆ ಎಂದರು.
ಇದರಲ್ಲಿ 281 ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ ಸಂಖ್ಯೆ ಜೋಡನೆಯಾಗದ ಕಾರಣ 35.95 ಲಕ್ಷ ರೂ. ಪರಿಹಾರ ರೈತರ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರ ವಿವರ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ಸಂಬಂಧಪಟ್ಟ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸಿದಲ್ಲಿ ಬೆಳೆ ವಿಮೆ ಪರಿಹಾರ ಜಮೆಯಾಗಲಿದೆ ಎಂದಿದ್ದಾರೆ.
ಇನ್ನೂ ಕಳೆದ ಡಿಸೆಂಬರ-2023 ಮಾಹೆಯಲ್ಲಿ ಜಿಲ್ಲೆಯಲ್ಲಿ ಮಳೆ ಆಶ್ರಿತ ತೊಗರಿ ಬೆಳೆ ವಿಮೆ ಮಾಡಿಸಿದ 1,20,724 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 83.63 ಕೋಟಿ ರೂ. ಮಧ್ಯಂತರ ಪರಿಹಾರ ಜಮೆ ಮಾಡಲಾಗಿತ್ತು. ಒಟ್ಟಾರೆಯಾಗಿ ಕಳೆದ 2023-24ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ 185.259 ಕೋಟಿ ರೂ. ಪರಿಹಾರ ಜಮೆಯಾಗಿದೆ.
ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,62,071 ರೈತರು, 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ವಿಮಾ ಸಂಸ್ಥೆಗೆ ವಿಮಾ ಕಂತಿನ ರೂಪದಲ್ಲಿ 160.30 ಕೋಟಿ ರೂ. ಸಂದಾಯ ಮಾಡಲಾಗಿತ್ತು. ಇದರಲ್ಲಿ ರೈತರ ವಂತಿಕೆ 18.47 ಕೋಟಿ ರೂ., ರಾಜ್ಯ ಸರ್ಕಾರದ ವಂತಿಕೆ 70.92 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದ ವಂತಿಕೆ 70.92 ಕೋಟಿ ರೂ. ಸೇರಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…