ಜೂನ್ 16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಹಾಸ್ಟೆಲ್ ಉದ್ಘಾಟನೆ

0
22

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ಧರಿಯಾಪುರ ಕೋಟನೂರ್ ಬಡಾವಣೆಯಲ್ಲಿ ಸಮುದಾಯದ ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಲಾಗಿರುವ ಹಾಸ್ಟೆಲ್ ಉದ್ಘಾಟನಾ ಸಮಾರಂಭ ಇದೇ ಜೂನ್ 16ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಶರಣು ಮೋದಿ ತಿಳಿಸಿದರು.

ನೂತನ ವಸತಿ ನಿಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಹಾಗೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

Contact Your\'s Advertisement; 9902492681

ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪೀಠದ 9ನೇ ಪೀಠಾಧಿಪತಿ ಚಿ.ಪೂಜ್ಯ ದೊಡ್ಡಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಡಾ.ದಾಕ್ಷಾಯಿಣಿ ಅವ್ವಾಜಿ, ಮಾದನಹಿಪ್ಪರಗಾದ ಅಭಿನವ ಶಿವಲಿಂಗ ಮಹಾಸ್ವಾಮಿ, ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಮುಗಳನಾಗಾವದ ಅಭಿನವ ಸಿದ್ಧಲಿಂಗ ಮಹಾಸ್ವಾಮಿ, ಚಿಣಮಗೇರಿಯ ಮಹಾಂತ ಶಿವಾಚಾರ್ಯರು, ಚವದಾಪುರಿ ಮಠದ ಡಾ.ರಾಜಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್,
ಶಾಸಕರಾದ ಎಂ.ವೈ.ಪಾಟೀಲ್, ಬಿ.ಆರ್.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇಲ್ಕೂರ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಚಂದ್ರಶೇಖರ ಪಾಟೀಲ್ ಹುಮನಾಬಾದ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರ ಗೌರವ ಉಪಸ್ಥಿತಿ ಇರಲಿದೆ ಎಂದು ಮಾಹಿತಿ ನೀಡಿದರು.

ಗುರುಮಠಕಲ್ ಶಾಸಕ ಶರಣಗೌಡ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ್ ಸಜ್ಜನ್, ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಸೇರಿದಂತೆ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ಗಣ್ಯ ಮಹನೀಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಚನ್ನಪ್ಪ ದಿಗ್ಗಾವಿ, ಭೀಮಾಶಂಕರ ಮಿಟೇಕರ್, ಸೋಮಶೇಖರ ಹಿರೇಮಠ, ಗೌರಿ ಚಿಚಕೋಟಿ ಹಾಗೂ ಈರಣ್ಣ ಗೊಳೇದ ಇದ್ದರು.

150 ಅರ್ಜಿ ಸ್ವೀಕೃತ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ರೂ.4.18 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಪ್ರವೇಶ ಕೋರಿ ಈಗಾಗಲೇ 150 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧ್ಯಕ್ಷ ಶರಣು ಮೋದಿ ಮಾಹಿತಿ ನೀಡಿದರು.

117 ವಿದ್ಯಾರ್ಥಿನಿಯರಿಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಆಯ್ಕೆ ಸಮಿತಿ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದರು.

ಒಟ್ಟು 51 ಕೋಣೆ ಸಾಮರ್ಥ್ಯದ ವಸತಿ ನಿಲಯದಲ್ಲಿ ಈಗಾಗಲೇ 34 ಕೋಣೆಗಳು ಸಿದ್ದವಾಗಿದ್ದು, ಇನ್ನೂ 17 ಕೋಣೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಕೋಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಪ್ರತಿ ವಿದ್ಯಾರ್ಥಿನಿಯಿಂದ ಮಾಸಿಕ ರೂ.900 ನಿರ್ವಹಣಾ ವೆಚ್ಚ ಮಾತ್ರ ಪಡೆಯಲಾಗುತ್ತಿದ್ದು, ಉಚಿತ ದಾಸೋಹ ವ್ಯವಸ್ಥೆ ಇರುತ್ತದೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here