ಬಿಸಿ ಬಿಸಿ ಸುದ್ದಿ

ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿ: ಕಲಬುರಗಿಯಲ್ಲಿ ಬಿಜೆಪಿ ಸಂಭ್ರಮ

ಕಲಬುರಗಿ: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಎಂಎಲ್ಸಿ ಅಮರನಾಥ್ ಪಾಟೀಲ್ ಇದೊಂದು ದೇಶದ ಇತಿಹಾಸದಲ್ಲಿ ಐತಿಹಾಸಿಕ ಕ್ಷಣ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು.

ಎನ್ ಡಿ ಎ ಮೈತ್ರಿ ಕೂಟ ದ ನಾಯಕರಾಗಿ ಭಾರತವನ್ನು ವಿಕಸಿತ ರಾಷ್ಟ್ರವಾಗಿಸಲು ಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ದೇಶವನ್ನು ಅಭಿವೃದ್ಧಿಯ ಕಡೆಗೆ ತೆಗೆದುಕೊಂಡು ಹೋಗಲಿದ್ದಾರೆ
ಎಂದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಮಾತನಾಡಿ ದೇಶದ ಇತಿಹಾಸದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವಿ ಮೆಚ್ಚಿದ ನಾಯಕನಾಗಿದ್ದರೆ ಭಾರತವನ್ನು ಬಲಿಷ್ಠ ಮತ್ತು ಸದೃಢ ರಾಷ್ಟ್ರವನ್ನಾಗಿಸಲು ಮೋದಿ ಅವರಿಗೆ ಕೈಜೋಡಿಸಿದ ಎಲ್ಲಾ ಮಿತ್ರ ಪಕ್ಷದ ನಾಯಕರಿಗೆ ಧನ್ಯವಾದಗಳು. ಈ ಐತಿಹಾಸಿಕ ಗೆಲುವಿಗೆ ಕಾರಣರಾದ ದೇಶದಾದ್ಯ ದೇಶದ ಎಲ್ಲಾ ಮತದಾರರಿಗೆ, ನಾಯಕರಿಗೆ, ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು ಎಂದರು.

ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರಾದ ಶರಣಪ್ಪ ತಳವಾರ್, ಲಿಂಗರಾಜ ಬಿರಾದಾರ್, ಶಿವಯೋಗಿ ನಾಗನಹಳ್ಳಿ, ಅರವಿಂದ್ ಪದ್ದಾರ್, ಭಾಗೀರಥಿ ಗುನ್ನಾಪುರ, ಮಹೇಶ್ ಚವಾನ್ ಪ್ರೀತಂ ಪಾಟೀಲ್, ಗೋಪಾಲ್ ಕೃಷ್ಣ ಕುಲಕರ್ಣಿ, ಶ್ರೀಧರ್ ಚೌಹಾನ್, ರೇಣುಕಾಚಾರ್ಯ ಸಲಗರ್ ರಾಜುಗೌಡ ನಾಗನಹಳ್ಳಿ, ರಾಹುಲ್ ಬಬಲಾದ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago