ಚಿತ್ತಾಪುರ: ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ತಗ್ಗು ಗುಂಡಿಗಳು ನಿರ್ಮಾಣವಾಗಿದ್ದು, ಅಪಾಯ ಸಂಭವಿಸುವ ಮುನ್ನ ದುರಸ್ತಿ ಮಾಡುವಂತೆ ರೈತ ಸಂಘದ ತಾಲೂಕ ಅಧ್ಯಕ್ಷ ಮೌನೇಶ್ ಭಂಕಲಗಾ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಪಟ್ಟಣದಿಂದ ಸಾತನೂರವರೆಗಿನ ರೈತರ ಜಮೀನುಗಳು ವ್ಯಾಪಿಸಿವೆ. ಹೀಗಾಗಿ ನೂರಾರು ರೈತರು ತಮ್ಮ ತಮ್ಮ ಹೊಲಗದ್ದೆಗಳಿಗೆ ಎತ್ತಿನ ಬಂಡಿ, ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನಗಳ ಮೂಲಕ ಸಾತನೂರ್, ಅಳ್ಳೋಳ್ಳಿ, ಭಂಕಲಗಿ, ಅಲ್ಲೂರ, ದಂಡಗುಂಡ ಗ್ರಾಮಗಳ ಜನರು ದಿನನಿತ್ಯ ಸಂಚರಿಸುವ ರಸ್ತೆಯಾಗಿದೆ.
ಇನ್ನೂ ಮೂರು ಕಿಲೋಮೀಟರ್ ದೂರದಲ್ಲಿ ಸಾತನೂರ ರಸ್ತೆಯಲ್ಲಿ ಸುಮಾರು ಒಂದು ಕಿಲೋ ಮೀಟರ್ ವರೆಗೂ ತಗ್ಗು ಗುಂಡಿಗಳು ನಿರ್ಮಾಣವಾಗಿದ್ದರಿಂದ ಪ್ರಯಾಣಿಕರಿಗೆ, ರೈತರಿಗೆ ಅಡಚಣೆ ಉಂಟಾಗುತ್ತಿದೆ. ಅಲ್ಲದೆ ರಸ್ತೆ ಅಪಘಾತಗಳಿಗೆ ಆಹ್ವಾನ ನೀಡಿದಂತಾಗಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ತಿ ಕಾಮಗಾರಿ ಮಾಡಬೇಕೆಂದು ಎಂದು ಅವರು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…