ಬಿಸಿ ಬಿಸಿ ಸುದ್ದಿ

ಸೆ.25 ರಂದು ಸಾವಿತ್ರಿಬಾಯಿ ಫುಲೆ ಜಯಂತಿ: ಶಾಸಕ ಡಾ.ಅಜಯಸಿಂಗ್ ಭಾಗಿ

ಜೇವರ್ಗಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ ದೇಶದ ಮೊಟ್ಟಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರಿಗೆ ನಮನ ಹಾಗೂ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆಯ ತಾಲೂಕ ಸಂಚಾಲಕ ಶಿವಕುಮಾರ ಗೋಲಾ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇದೇ ೨೫ರಂದು ಬೆಳಿಗ್ಗೆ ೧೦ಗಂಟೆಗೆ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸೊನ್ನ ವಿರಕ್ತ ಮಠದ ಡಾ.ಶಿವಾನಂದ ಮಹಾಸ್ವಾಮೀಜಿ ಹಾಗೂ ಚಿಗರಳ್ಳಿ ಮಠದ ಸಿದ್ದಕಬೀರ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸುವರು. ಶಾಸಕ ಡಾ.ಅಜಯಸಿಂಗ್ ಸಭೆಯನ್ನು ಉದ್ಘಾಟಿಸುವರು. ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಮಾಟೀಲ ಗೌತಮ ಬುದ್ಧ ಅವರ ಭಾವಚಿತ್ರಕ್ಕೆ, ಉಪತಹಸೀಲ್ದಾರ ಬಸವರಾಜ ರಕ್ಕಸಗಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ, ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾ ಪಂಚಾಯತ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಪ್ಪ ಕೂಡಲಗಿ, ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ ಮಾಲಾರ್ಪಣೆ ಮಾಡುವರು. ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಅಧ್ಯಕ್ಷ ಹಣಮಂತ ಬಿ ಯಳಸಂಗಿ ಪ್ರಾಸ್ತಾವಿಕವಾಗಿ ಮಾತನಾಡುವರು. ಸೊನ್ನ ಎಸ್.ಜಿ.ಎಸ್.ವಿ ಪಿಯು ಕಾಲೇಜಿನ ಉಪನ್ಯಾಸಕ ನಿಜಲಿಂಗ ದೊಡ್ಮನಿ ವಿಶೇಷ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಸಿಪಿಐ ಡಿ.ಬಿ ಪಾಟೀಲ, ಜಿಪಂ ಮಾಜಿ ಸದಸ್ಯ ಚಂದ್ರಶೇಖರ ಹರನಾಳ, ತಾಲೂಕ ವೈದ್ಯಾಧಿಕಾರಿ ಡಾ.ಸಿದ್ದು ಪಾಟೀಲ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಸವರಾಜ ಕೊಂಬಿನ, ಮುಖಂಡರಾದ ಶೌಕತ್ ಅಲಿ ಆಲೂರ, ಹೈಯ್ಯಾಳಪ್ಪ ಗಂಗಾಕರ, ದಲಿತ ಸೇನೆ ಜಿಲ್ಲಾಧ್ಯಕ್ಷ ಡಿ.ಕೆ ಮದನಕರ, ದಲಿತ ಸೇನೆಯ ಯುವ ಘಟಕದ ಅಧ್ಯಕ್ಷ ಗೌಸಬಾಬಾ ಜುನೈದಿ, ಪಂಡಿತ ಜಿ ನೆಲ್ಲಗಿ, ದಲಿತ ಸೇನೆಯ ವಿಭಾಗೀಯ ಅಧ್ಯಕ್ಷ ಭೀಮರಾಯ ನಗನೂರ, ಶಿವಕುಮಾರ ಕಲ್ಲಾ, ಶ್ರೀಮಂತ ಧನ್ನಕರ, ಮಲ್ಲಿಕಾರ್ಜುನ ಕುಳಗೇರಿ, ದಲಿತ ಪ್ಯಾಂಥರ್ ಜಿಲ್ಲಾ ಉಪಾಧ್ಯಕ್ಷ ರವಿ ಕುಳಗೇರಿ, ಮಲ್ಲಿಕಾರ್ಜುನ ಮಳ್ಳಿ, ಪ್ರಭಾಕರ ಸಾಗರ, ಪೀರಪ್ಪ ರ‍್ಯಾವನೂರ ಭಾಗವಹಿಸುವರು.

ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕ್ಷೇತ್ರ ಸಮನ್ವಯಾಧಿಕಾರಿ ಹಣಮಂತಪ್ಪ ಕುಳಗೇರಿ, ಡಾ. ಸಿದ್ದು ಕಕ್ಕಳಮೇಲಿ, ಬಸಣ್ಣ ಬಬಲಾದ, ಶರಣಪ್ಪ ಜೈನಾಪೂರ, ಸಿದ್ದಪ್ಪ ಸಿಂಗೆ, ಡಾ.ಕರಿಗೂಳೇಶ್ವರ ಪರತಹಬಾದ, ಸುಶಿಲಕುಮಾರ ಶೆಟ್ಟಿ, ಡಾ. ಅಶೋಕ ದೊಡ್ಮನಿ ಹಂಗರಗಾ(ಕೆ), ಸವಿತಾ ವಿಶ್ವರಾಧ್ಯ ಬಡಿಗೇರ, ಸಿಡಿಪಿಓ ಗುರುಶೆಟ್ಟಿ, ಮರೆಪ್ಪ ಬೇಗಾರ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago