ಸುರಪುರ: ತಾಲುಕಿನ ಬಾದ್ಯಾಪುರ ಗ್ರಾಮ ದಿಂದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಅಭಿಮಾನಿಯೊಬ್ಬ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ದೀಡ ನಮಸ್ಕಾರ ಹಾಕುವ ಮೂಲಕ ತನ್ನ ಹರಕೆ ಸಲ್ಲಿಸಿದ್ದಾನೆ.
ಬಾದ್ಯಾಪುರ ಗ್ರಾಮದ ಕಾಂಗ್ರೆಸ್ ಮುಖಂಡ ಹಾಗೂ ರಾಜಾ ವೇಣುಗೊಪಾಲ ನಾಯಕ ಅವರ ಅಭಿಮಾನಿ ಯಲ್ಲಪ್ಪ ಕವಲ್ದಾರ್ ಕಳೆದ ಮೇ 7 ರಂದು ನಡೆದ ಸುರಪುರ ವಿಧಾನಸಭಾ ಉಪ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ ಅವರು ಜಯಗಳಿಸಿದಲ್ಲಿ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ದೀಡ ನಮಸ್ಕಾರ ಹಾಕುವುದಾಗಿ ಹರಕೆ ಹೊತ್ತಿದ್ದ,ಈಗ ಫಲಿತಾಂಶ ಬಂದು ರಾಜಾ ವೇಣುಗೋಪಾಲ ನಾಯಕ ಅವರು ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಾದ್ಯಾಪುರ ಗ್ರಾಮ ದಿಂದ ಹತ್ತು ಕಿಲೋ ಮೀಟರ್‍ಗಳ ದೂರದ ಸುರಪುರ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ವರೆಗೆ ದೀಡ ನಮಸ್ಕಾರ ಹಾಕಿ ಹರಕೆ ತೀರಿಸಿದ್ದಾನೆ.
ಗ್ರಾಮ ದಿಂದ ದೀಡ ನಮಸ್ಕಾರದ ಯಾತ್ರೆ ಆರಂಭವಾಗುತ್ತಿದ್ದಂತೆ ಗ್ರಾಮದಲ್ಲಿನ ಅನೇಕ ಜನ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಹಿಡಿದು ಭಾಜಾ ಬಜಂತ್ರಿಯೊಂದಿಗೆ ಯಲ್ಲಪ್ಪ ಕವಲ್ದಾರ್ ಜೊತೆಗೆ ತಾವುಗಳು ಸಾಗಿಬಂದು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ತಲುಪಿದ ನಂತರ ಯಲ್ಲಪ್ಪ ಕವಲ್ದಾರ್‍ಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಯ್ಯಪ್ಪ ವಾರಿ,ಭೀಮಣ್ಣ ಕುರಿ,ಸಿದ್ದಪ್ಪ ಅಲಗುಂಡಿ,ಭೀಮಣ್ಣ ಕವಲ್ದಾರ್,ಸಕ್ರೆಪ್ಪ ಅಂತೋಳಿ,ಶರಣಪ್ಪ ಬ್ಯಾಳಿ,ಭೀಮಣ್ಣ ಪಾಳೆಗಾರ ಸೇರಿದಂತೆ ಅನೇಕರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…