ಬಿಸಿ ಬಿಸಿ ಸುದ್ದಿ

ಬೆಂಗಳೂರು: ಅಗ್ನಿವೀರ್ ನೇಮಕಾತಿ ರ್ಯಾಲಿ 27 ರಿಂದ

ಬೆಂಗಳೂರು: ಬೆಂಗಳೂರಿನ ಪ್ರಧಾನ ಕಚೇರಿ ನೇಮಕಾತಿ ವಲಯದ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳು ಹಾಗೂ ಬೆಂಗಳೂರು ನಗರದಿಂದ ಆಯ್ಕೆಯಾದ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು 2024 ನೇ ಜೂನ್ 27 ರಿಂದ ಜುಲೈ 02 ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ.

2024ನೇ 22 ಏಪ್ರಿಲ್ ನಿಂದ 07 ಮೇ ರವರೆಗೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆಯ ನಂತರ ಶಾರ್ಟ್‍ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ರ್ಯಾಲಿಯನ್ನು ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮೆನ್ 10 ನೇ ಉತ್ತೀರ್ಣರು ಮತ್ತು ಅಗ್ನಿವೀರ್ 10 ನೇ ಉತ್ತೀರ್ಣರ ದಾಖಲಾತಿಗಾಗಿ ನಡೆಸಲಾಗುತ್ತಿದೆ.

ಸೇನೆಯಲ್ಲಿ ಅಭ್ಯರ್ಥಿಗಳ ವಿಭಾಗಗಳು/ಪ್ರವೇಶಗಳು ರ್ಯಾಲಿಯನ್ನು ಸುಗಮವಾಗಿ ನಡೆಸಲು ನಾಗರಿಕ ಆಡಳಿತವು ಪೂರ್ವಭಾವಿಯಾಗಿ ಎಲ್ಲಾ ಅಗತ್ಯ ಸಹಾಯವನ್ನು ಒದಗಿಸುತ್ತಿದೆ. ಸಿವಿಲ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ ಕರಿಯಪ್ಪ ಮೆಮೋರಿಯಲ್ ಹಾಲ್, ಮಡಿಕೇರಿಯಲ್ಲಿ ಎಲ್ಲಾ ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಪ್ರವೇಶ ಕಾರ್ಡ್‍ಗಳನ್ನು ಈಗಾಗಲೇ ಅವರ ನೋಂದಾಯಿತ ಇ-ಮೇಲ್ ಐಡಿಗೆ ಕಳುಹಿಸಲಾಗಿದೆ ಮತ್ತು ಅವರ ಬಳಕೆದಾರ ಹೆಸರು ಮತ್ತು ಪಾಸ್‍ವರ್ಡ್ ಮೂಲಕ ಲಾಗಿನ್ ಆಗಿ ಭಾರತೀಯ ಸೇನೆಯ ವೆಬ್‍ಸೈಟ್‍ನಲ್ಲಿ ಸಹ ಮಾಹಿತಿ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

emedialine

Recent Posts

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 mins ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

35 mins ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

11 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

11 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

11 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

11 hours ago