ಹೈದರಾಬಾದ್ ಕರ್ನಾಟಕ

ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆ ಕಡೆಗೆ

ಕಲಬುರಗಿ; ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ “ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ” ಎಂಬ ಸಂಕಲ್ಪದೊಂದಿಗೆ ಈ ವರ್ಷ ಗ್ರಾಮೀಣ ಭಾಗದ ಕನ್ನಡ ಸರಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷರಾದ, ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಶಾಲೆಯ ಮೂಲಭೂತ ಸಮಸ್ಯೆಗಳು ಪರಿಹರಿಸಬೇಕು, ಶಿಕ್ಷಣ ಗುಣ ಮಟ್ಟ ಸುಧಾರಿಸಬೇಕು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಹೆಚ್ಚಿಸಬೇಕು ಅಲ್ಲದೆ ಮುಖ್ಯವಾಗಿ ಗ್ರಾಮೀಣ ಭಾಗದ ಕನ್ನಡ ಸರಕಾರಿ ಶಾಲೆ ಉಳಿಯಬೇಕು ಎಂಬ ಉದ್ದೇಶದಿಂದ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘವು ಪ್ರತಿ ವರ್ಷ ಗ್ರಾಮೀಣ ಮಟ್ಟದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಸ್ಪೂರ್ತಿ ನೀಡುವುದರೊಂದಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ಸರಕಾರಿ ಕನ್ನಡ ಪ್ರೌಢ ಶಾಲೆಯಲ್ಲಿರುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸರಣಿ ಕಾರ್ಯಕ್ರಮದಲ್ಲಿ ಶಾಸಕರು, ಶಿಕ್ಷಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಪತ್ರಕರ್ತರು, ಕಲಾವಿದರು, ಪೂಜ್ಯರು, ಶಿಕ್ಷಣ ತಜ್ಞರು, ಗ್ರಾಮದ ಮುಖಂಡರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಮುಖ್ಯ ಗುರುಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಸ್ಥಳದಲ್ಲಿಯೇ ಸಮಸ್ಯೆ ಪರಿಹರಿಸುವ ವಿನುತನವಾದ ಕಾರ್ಯಕ್ರಮ ಸಂಘವು ಆಯೋಜಿಸಲಾಗಿದೆ.

ಸರಣಿ ಕಾರ್ಯಕ್ರಮದ ಚಾಲನೆ 12 ರಂದು ಬುಧವಾರ ಕಲಬುರಗಿ ತಾಲೂಕಿನ ಹರಸೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ. ಬರುವ ದಿನಗಳಲ್ಲಿ ತಾಜ ಸುಲ್ತಾನಪುರ, ಕುಮಸಿ, ಕಡಣಿ, ಪಾಳಾ, ಶ್ರೀನಿವಾಸ ಸರಡಗಿ, ಬಸವಪಟ್ಟಣ, ತಾವರಗೇರಾ, ಹೆಬ್ಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸರಣಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸುದರೊಂದಿಗೆ, ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗುವುದು ಎಂದು ತಿಳಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago