ಬೀಜ ರಸಗೊಬ್ಬರ ಸಮರ್ಪಕ ವಿತರಣೆಗೆ ಹರ್ಷಾನಂದ ಗುತ್ತೇದಾರ ಆಗ್ರಹ

0
17

ಕಲಬುರಗಿ: ಮುಂಗಾರು ಬಿತ್ತನೆಗಾಗಿ ಸರಿಯಾದ ಸಮಯದಲ್ಲಿ ಸಮರ್ಪಕ ಬೀಜ ಮತ್ತು ರಸಗೊಬ್ಬರ ವಿತರಣೆ ಮಾಡುವಂತೆ ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರಿಯಾದ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಮತ್ತು ಗೊಬ್ಬರ ವಿತರಿಸಬೇಕು. ಬೀಜ, ಗೊಬ್ಬರ ವಿತರಣೆ ಮಾಡದೇ ಇರುವುದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲದೇ ಖಾಸಗಿ ಅಂಗಡಿಗಳಲ್ಲಿ ದುಬಾರಿ ವೆಚ್ಚದಲ್ಲಿ ಖರೀದಿಸುವ ಅನಿವಾರ್ಯತೆ ಬಂದಿದೆ ಎಂದು ಗುಡುಗಿದ್ದಾರೆ.

Contact Your\'s Advertisement; 9902492681

ಕೃಷಿ ಚಟುವಟಿಕೆಯ ಸಾಮಗ್ರಿಗಳು ರೈತರಿಗೆ ಸೂಕ್ತ ಸಮಯದಲ್ಲಿ ಕೈಗೆ ಸಿಗುವಂತೆ ತಾಲೂಕಿನಲ್ಲಿ ಕ್ರಮಕ್ಕೆ ಮುಂದಾಗಬೇಕು. ತಾಲೂಕಿನ ಕೆಲ ಆಗ್ರೋ ಅಂಗಡಿಗಳಲ್ಲಿ ಕಳಪೆ ಬೀಜ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತಿದ್ದಾರೆ ಇಂತಹವರ ಬಗ್ಗೆ ನಿಗಾ ವಹಿಸಬೇಕು. ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ದಲ್ಲಾಳಿಗಳ ಸಂಖ್ಯೆ ಹೆಚ್ಚಾಗಿದೆ. ಶಾಸಕರ ಬೆಂಬಲಿಗರು ಹೇಳಿದವರಿಗೆ ಮಾತ್ರ ಬೀಜ ರಸಗೊಬ್ಬರ ವಿತರಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಈಗಾಗಲೇ ರೈತ ಸಂಪರ್ಕ ಕೇಂದ್ರಗಳು ಸಮಯ ಪಾಲನೆ ಮಾಡುವಲ್ಲಿ ವಿಫಲವಾಗುತ್ತಿವೆ. ರೈತ ಕೇಂದ್ರದ ಅಧಿಕಾರಿಗಳು ರೈತರಿಗೆ ರಸಗೊಬ್ಬರ ನೀಡದೆ ಅಕ್ರಮವಾಗಿ ಗೋಡಾನ್‍ಗಳಲ್ಲಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಲಾರಿಗಟ್ಟಲೇ ಸರಕಾರದ ಕಣ್ಣಿಗೆ ಮಣ್ಣೆರಚಿ ರಸಗೊಬ್ಬರ ಮಾರಿಕೊಳ್ಳುತ್ತಿದ್ದಾರೆ. ಕೂಡಲೇ ಕಟ್ಟು ನಿಟ್ಟಿನ ಕ್ರಮಕೈಗೊಂಡು ರೈತರಿಗೆ ಅನುಕೂಲ ಮಾಡಿ ಕೊಡಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ಮುಂಗಾರು ಪ್ರಾರಂಭಗೊಂಡಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಬೆಲೆ ದುಪ್ಪಟ್ಟು ಆಗಿರುವುದರಿಂದ ರೈತರು ಖರೀದಿ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಸಬ್ಸಿಡಿ ಕೂಡ ಸಿಗುತ್ತಿಲ್ಲ. ಕೂಡಲೆ ಸರಕಾರ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ ಉತ್ತಮ ಮಳೆಯ ಕೊರತೆಯಿಂದ ಬೆಳೆಗಳು ಬಾರದೆ ರೈತರು ಆರ್ಥಿಕವಾಗಿ ಸಂಕಷ್ಟ ಅನುಭವಿಸಿದ್ದಾರೆ. ಈಗ ಏಕಾಏಕಿ ದರಗಳು ಹೆಚ್ಚಿಸಿರುವುದರಿಂದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿಸಲು ಸಾಧ್ಯವಿಲ್ಲ. ಅದಲ್ಲದೆ ರೈತ ಸಂಪರ್ಕ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಬೀಜ ಹಾಗೂ ರಸಗೊಬ್ಬರಗಳು ದೊರಕುತ್ತಿಲ್ಲ. ರೈತ ಸಂಪರ್ಕ ಕೇಂದ್ರಗಳ ಎದುರು ರೈತರು ದಿನಪೂರ್ತಿ ಸರತಿಯಲ್ಲಿ ನಿಂತರು ಯಾವುದೇ ಪ್ರಯೋಜನವಾಗುತ್ತಿಲ್ಲ. ಸಬ್ಸಿಡಿಗಳಲ್ಲಿ ದೊರಕುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಕಳ್ಳರ ಕೈ ಸೇರಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಇμÁ್ಟದರೂ ಕೃಷಿ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ. ರೈತರ ನೆರವಿಗೆ ಬರುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ದೇಶದ ಬೆನ್ನೆಲುಬು ರೈತರಿಗೆ ಹೊಡೆತಗಳ ಮೇಲೆ ಹೊಡೆತಗಳನ್ನು ಬೀಳುತ್ತಿದ್ದರು ಸರ್ಕಾರ ಯಾವ ಪುರುμÁರ್ಥಕ್ಕಾಗಿ ಬೆಲೆ ಏರಿಕೆ ಮಾಡಿದೆ ?. ಕೂಡಲೇ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಬೆಲೆ ಇಳಿಕೆ ಮಾಡಿ ಸಬ್ಸಿಡಿ ದರದಲ್ಲಿ ವಿತರಿಸಬೇಕು. ಬಡ ರೈತರಿಗೆ ಉಚಿತವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here