ಬಿಸಿ ಬಿಸಿ ಸುದ್ದಿ

ಕೇಂದ್ರ ಸಂಪುಟದಲ್ಲಿ ಮಾದಿಗರಿಗೆ ಅನ್ಯಾಯ: ದೀಪಕ್ ಹೊಸ್ಸೂರಕರ್

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೊದಿಜೀಯವರು ಇಡೀ ಭಾರತದ ಮಾದಿಗ ಸಮುದಾಯದ ಪರವಾಗಿ ಅವರಿಗೆ ಮತ್ತು ಕರ್ನಾಟಕದಿಂದ ಆಯ್ಕೆಯಾದ ಮಂತ್ರಿಗಳಿಗೆ ಹಾಗೂ ಮಾದಿಗ ಸಮುದಾಯದ ಲೋಕಸಭಾ ಸದಸ್ಯರಾಗಿ ಕರ್ನಾಟಕದಿಂದ ಆಯ್ಕೆಯಾಗಿರುವ ರಮೇಶ ಜಿಗಜಿಣಗಿ ಮತ್ತು ಗೋವಿಂದ ಕಾರಜೋಳ ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ನಗರ ಯೋಜನಾ ಪ್ರಾಧೀಕಾರ ಮಾಜಿ ಹೊಸೂರಕರ್‌ಆರೊಪಿಸಿದ್ದಾರೆ. ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಆರೋಪಿಸಿದರು.

1984ರ ನಂತರ ರಮೇಶ ಜಿಗಜಿಣಗಿ ಮತ್ತು ಗೋವಿಂದ ಕಾರಜೋಳ ಅವರು ರಾಮಕೃಷ್ಣ ಹೆಗಡೆರವರ ನೇತೃತ್ವದಲ್ಲಿ ಜನತಾ ಪಕ್ಷವನ್ನು ಬೆಳೆಸಿದರು ಇದರ ಪರಿಣಾಮ ಕರ್ನಾಟಕ ಜನತಾ ಪಕ್ಷ 44 ಶಾಸಕರಿಂದ 84 ಶಾಸಕರು ಗೆದ್ದು ಬಂದಿದ್ದರು. ಈ ಮಾತನ್ನು ಬೆಂಗಳೂರಿನ ಸಭೆಯೊಂದರಲ್ಲಿ ಅಂದಿನ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್‌ ಕೃಷ್ಣ ಅಡ್ವಾಣಿ ಅವರು ತುಂಬು ಮನಸ್ಸಿನಿಂದ ರಮೇಶ ಜಿಗಜಿಣಗಿ ಮತ್ತು ಗೋವಿಂದ ಕಾರಜೋಳ ಅವರನ್ನು ಅಭಿನಂದಿಸಿದ್ದರು.

ನಂತರದ ದಿನಗಳಲ್ಲಿ 1984ರಿಂದ ಇದುವರೆಗೆ ಮಾದಿಗ ಸಮುದಾಯದ ನಾಯಕರು ಮತ್ತು ಸಮುದಾಯ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದು ಬಿಜೆಪಿಯ ಭಾಗವಾಗಿ ಇಂದು ಮಾದಿಗ ಸಮುದಾಯ ನಿಂತಿದೆ. ಈ ಸಮುದಾಯ ಬಿಜೆಪಿ ಪರವಾಗಿ ನಿಂತಿದೆ ಎಂದು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದೆ. ಆದರೆ ಇತ್ತಿಚಿನ 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮಾದಿಗ ಸಮಾಜ ಬಿಜೆಪಿ ಪರವಾಗಿ ನಿಂತಿರುವುದನ್ನು ಸ್ಪಷ್ಟವಾಗಿ ಕಾಣಬಹುದು.

ಕಾಂಗ್ರೆಸ್‌ ಮತ್ತು ಇತರೆ ಪಕ್ಷಗಳು ಬಿಜೆಪಿ ದಲಿತ ವಿರೋಧಿ ಮತ್ತು ಬಿಜೆಪಿ ಗೆದ್ದರೆ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ ಸಂವಿಧಾನ ವಿರೋಧಿ ದಲಿತರಿಗೆ ಅವಕಾಶಗಳನ್ನು ಕೊಡುವುದಿಲ್ಲ ಎಂದು ನಿರಂತರವಾಗಿ ದಾಳಿ ಮಾಡಿದಾಗ ಬಿಜೆಪಿ ಪರವಾಗಿ ಬಲವಾಗಿ ನಿಂತು ಪಕ್ಷದ ಪರ ಕೆಲಸ ಮಾಡಿದವರು ಮಾದಿಗ ಸಮಾಜದವರು ಎಂದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago