14 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೆ.ಕೆ.ಆರ್.ಡಿ.ಬಿ. ಪ್ರಗತಿ ಪರಿಶೀಲನಾ ಸಭೆ: ಡಾ.ಅಜಯ್ ಸಿಂಗ್

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇದೇ ಜೂನ್ 14 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಗುರುವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ.ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದರು.

ಸಿ.ಎಂ. ಸಭೆ ನಂತರ ಇದೇ ಜೂನ್ 28ಕ್ಕೆ ಮಂಡಳಿ ಸಭೆ ನಡೆಸಲು ನಿರ್ಧರಿಸಿದ್ದು, 15 ದಿನದೊಳಗೆ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಪ್ರಸಕ್ತ ಸಾಲಿನ ಕೆಲಸಗಳು ಆರಂಭಿಸಲಾಗುವುದು ಎಂದರು.

ಕಳೆದ ವರ್ಷ ನಮ್ಮ ಸರ್ಕಾರ ಈ ಭಾಗಕ್ಕೆ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ 3 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಅದರಂತೆ ಪ್ರದೇಶದಲ್ಲಿ ರಸ್ತೆ, ಚರಂಡಿ ನೊರ್ಮಾಣ, ಮೂಲಸೌಕರ್ಯ ಕೆಲಸ ಭರದಿಂದ ಸಾಗಿದೆ. ಇದರೊಂದಿಗೆ ಪ್ರದೇಶದಲ್ಲಿ ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ ಎಂದರು.

ನೀಟ್ ಪರೀಕ್ಷೆ ಅವ್ಯವಹಾರ ಕುರಿತಂತೆ ಪ್ರತಿಕ್ರಿಯಿಸಿದ ಡಾ.ಅಜಯ್ ಸಿಂಗ್ ಅವರು ಲೋಕಸಭಾ ಚುನಾವಣಾ ಫಲಿತಾಂಶ ದಿನವೆ ಪರೀಕ್ಷೆ ರಿಸಲ್ಟ್ ಘೋಷಣೆ ಮಾಡಿದ್ದು, ಹಲವು ಅವಮಾನಕ್ಕೆ ಎಡೆಮಾಡಿಕೊಟ್ಟಿದೆ. ಎಲ್ಲೆಡೆ ಅವ್ಯವಹಾರ ಕೇಳಿ ಬರುತ್ತಿದ್ದು, ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ‌ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ‌ ಎಂದರು.

ಶಿಕ್ಷಣಕ್ಕೆ ಹೆಚ್ಚಿನ ಒತ್ತು: ಪ್ರದೇಶದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಮಂಡಳಿ ಅತಿಥಿ ಶಿಕ್ಷಕರನ್ನು ನೇಮಿಸಬಹುದು. ಪೂರ್ಣ ಪ್ರಮಾಣದಲ್ಲಿ ಶಿಕ್ಣಕರ ನೇಮಕ ಸರ್ಕಾರದ ಹಂತದಲ್ಲಿಯೇ ನಡೆಯಬೇಕಾಗುತ್ತದೆ. ಮುಖ್ಯಮಂತ್ರಿಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಒತ್ತಾಯ ಮಾಡಲಾಗುವುದು. ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಅನುಭವಿ ಶಿಕ್ಷಣ ತಜ್ಞರ ಸಮಿತಿ ರಚಿಸಿ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಮಂಡಳಿಯು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾದ 652 ಕೋಟಿ ರೂ. ಮೊತ್ತದಲ್ಲಿ ಫಲಿತಾಂಶ‌ ಸುಧಾರಣೆ ನಿಟ್ಟಿನಲ್ಲಿ ಕೇವಲ 3 ಕೋಟಿ ರೂ. ಖರ್ಚು ಮಾಡಿದೆ. ಮುಂದಿನ‌ ದಿನದಲ್ಲಿ ಈ ಮೊತ್ತ ಹೆಚ್ಚಿಸಲಾಗುವುದು ಎಂದರು.

2,009 ಕೋಟಿ ರೂ. ಖರ್ಚು: ಕೆ.ಕೆ.ಆರ್.ಡಿ.ಬಿ. ಮಂಡಳಿಗೆ 2023-24ನೇ ಸಾಲಿಗೆ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ, 3 ಸಾವಿರ ಕೋಟಿ ರೂ. ಹಂಚಿಕೆ‌ ಮಾಡಲಾಗಿದೆ. ಇದರಲ್ಲಿ ಇದೂವರೆಗೆ 2,009 ಕೋಟಿ ರೂ. ಖರ್ಚು ಮಾಡಿದ್ದು, ಬರುವ ಆಗಸ್ಟ್ ಮಾಹೆ ವರೆಗೆ ಉಳಿದ ಅನುದಾನ ಸಹ ಖರ್ಚು ಮಾಡಲಾಗುವುದು ಎಂದರು.

371ಜೆ ಮೀಸಲಾತಿ ವಿರೋಧಕ್ಕೆ ಖಂಡನೆ: ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ದಶಕಗಳ ಹೋರಾಟ ಫಲವಾಗಿ 371(ಜೆ) ಮೀಸಲಾತಿ ದೊರಕಿದೆ. ಇತ್ತೇಚೆಗೆ ಬೆಂಗಳೂರಿನಲ್ಲಿ ಕೆಲವು ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಖಂಡಿಸುತ್ತೇನೆ ಎಂದ ಅವರು, ಈ ಭಾಗಕ್ಕೆ ಸಂವಿಧಾನ ಬದ್ಧ ಸಿಗಬೇಕಾದ ಸವಲತ್ತು ದೊರಕಿಸಲು ಮತ್ತು ಮೀಸಲಾತಿ ರಕ್ಷಣೆ‌ಗೆ ತಾವು ಬದ್ಧರಾಗಿದ್ದೇವೆ. ಯಾವುದೇ ಹಂತದ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420