ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ

0
22

ಕಲಬುರಗಿ: ಬಾಲಕಾರ್ಮಿಕ ಪದ್ಥತಿ ಸಮಾಜದ ದೊಡ್ಡ ಪಿಡುಗಾಗಿದ್ದುಅದನ್ನು ತಡೆಯಲು ಸಾರ್ವಜನಿಕರಲ್ಲಿ ಮತ್ತು ಪಾಲಕರಲ್ಲಿ ಜಾಗೃತಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಅನುಷ್ಠಾನ ಅಧಿಕಾರಿಗಳಿಗೆ  ಕಲಬುರಗಿ ೩ ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ,ಎಂ,ಎಸ್,ಸಿ ಸುಶಾಂತ ಚೌಗಲೆ ಹೇಳಿದರು.

ಬುಧವಾರದಂದು ಜಿಲ್ಲಾಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ,ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣಿ ಅಂಗವಾಗಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ಹಾಗೂ ತಿದ್ದುಪಡಿ ಕಾಯ್ದೆ ೨೦೧೬ರ ಕುರಿತು ಕಲಬುರಗಿ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ (ಕಲಂ ೧೬ ಮತ್ತು ೧೭ ನಿರೀಕ್ಷಕರು) ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವುದರ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ಸಮಾಜದಲ್ಲಿ ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಿದೆ ಶಿಕ್ಷಣ ಇಲಾಖೆ ಮಾತ್ರ ಕಾರ್ಯಕ್ರಮ ಹಮ್ಮಿಕೊಂಡರೆ ಸಾಲದು ಅದಕ್ಕೆ ಪಾಲಕರು ಸಹ ಕೈ ಜೋಡಿಸಬೇಕು ಎಂದು ಹೇಳಿದರು.

ಎಲ್ಲಾ ಇಲಾಖೆಯ ಎಲ್ಲರೂ ತಮ್ಮ ಕೆಲಸ ಎಂದು ಭಾವಿಸಿ ಬಾಲಕಾರ್ಮಿಕ ಮಕ್ಕಳನ್ನು ತಡೆಯುವ ಕೆಲಸ ಮಾಡಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ  ಭಂವರ್ ಸಿಂಗ್ ಮೀನಾ ಮಾತನಾಡಿ, ಇಲಾಖೆಯಿಂದ ಬೀದಿ ನಾಟಕ ಸೇರಿದಂತೆ ಬಾಲ ಕಾರ್ಮಿಕ ತಡೆಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಉಜ್ವಲಕ್ಕಾಗಿ ಮಕ್ಕಳನ್ನು ಪಾಲಕರು ಶಾಲೆ ಕಳುಹಿಸಬೇಕು ಎಂದು ಹೇಳಿದರು.

ಬಾಲಕಾರ್ಮಿಕ ಪದ್ದತಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.  ಜೊತೆಗೆ ಶಾಲೆಯಲ್ಲಿ ಒಳ್ಳೆಯ ವಾತಾವಾರಣ ಇರಬೇಕು ಎಲ್ಲಾ ರೀತಿಯ ಸೌಕರ್ಯಗಳನ್ನು  ನೀಡಬೇಕಾಗುತ್ತದೆ  ಹಾಗೂ ಸೌಕಾರ್ಯ ಕೊಡುವದರಿಂದ ಶಾಲೆಯನ್ನು ಬಿಟ್ಟು ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.

ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಬೇಕು ಮತ್ತು ಪಂಚಾಯಿತಿಯಲ್ಲಿ ಮಕ್ಕಳಗಾಗಿ ಗ್ರಂಥಾಲಯಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಬಾಲಕಾರ್ಮಿಕರನ್ನು ತಡೆಕಟ್ಟಲು ಎಲ್ಲಾ ಇಲಾಖೆಗಳ ಸಹಕಾರ ಮುಖ್ಯವಾಗಿದೆ  ಎಂದು ಹೇಳಿದರು.

ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಯಾವುದೇ ಇಲಾಖೆಗಳು ಇದು ನನಗೆ ಸಂಬಂಧವಿಲ್ಲ ಅನ್ನಕೂಡದು ಒಗ್ಗಾಟಗಿ ಕೆಲಸ ನಿರ್ವಹಿಸಬೇಕೆಂದರು.

ಶಿಕ್ಷಣದಿಂದ ಎಷ್ಟು ಜನರು ವಂಚಿತರಾಗಿ ಬೇರೆ ಬೇರೆ ಕೆಲಸಗಳಿಗೆ ತೊಡಗುತ್ತಾರೆ ಇದು ನಮ್ಮದು ಒಂದು ಮೂಲಭೂತ ಕರ್ತವ್ಯ ಎಂದು ಭಾವಿಸಿ ಕೆಲಸ ನಿರ್ವಹಿಸಿ ತರಬೇತಿ ನಂತರ ಎಲ್ಲೆ ಬಾಲಕಾರ್ಮಿಕರು ಕಂಡು ಬಂದಲ್ಲಿ ಪ್ರಕರಣವನ್ನು  ದಾಖಲಿಸಬೇಕು ಪ್ರತಿಯೊಬ್ಬ ಇಲಾಖೆಯವರು ಒಗಟ್ಟಿನಿಂದ  ಕೆಲಸ ನಿರ್ವಹಿಸಿದ್ದಲ್ಲಿ ಕಲಬುರಗಿಯನ್ನು ಮುಂದಿನ ದಿನಗಳಲ್ಲಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿ ಮಾಡಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಡಾ. ಹನುಮಂತರಾಯ ಕರಡಿ, ಮಾತನಾಡಿದರು.  ಸಹಾಯಕ  ಕಾರ್ಮಿಕ ಆಯುಕ್ತರಾದ ಡಾ. ಅವಿನಾಶ ನಾಯ್ಕ, ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಹಳಿಮನಿ, ಜಿಲ್ಲಾಮಟ್ಟದ ಅನುಷ್ಠಾನ ಅಧಿಕಾರಿಗಳು ಸೇರಿದಂತೆ ಹಿರಿಯ ಕಾರ್ಮಿಕರುಗಳಾದ  ಕವಿತಾ, ಕೆ.ಎಸ್.ಪ್ರಸನ್ನ,ರವೀಂದ್ರಕುಮಾರ ಬಲ್ಲೂರ್, ಶಿವರಾಜ ಪಾಟೀಲ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here