ಸರಕಾರಿ ಶಾಲೆಯ ವಿದ್ಯಾರ್ಥಿಗಳು ಸಮಾಜದ ಆಸ್ತಿ

0
43

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಸರ್ಕಾರಿ ಕನ್ನಡ ಶಾಲೆ ಅಳಿವು ಉಳಿವಿನ ಪ್ರಶ್ನೆಯಾಗಿದೆ, ಸರಕಾರಿ ಶಾಲೆಗಳು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕೃಷಿ ವಿಜ್ಞಾನಿ ಶರಣಬಸಪ್ಪ ಪಾಟೀಲ ಹೇಳಿದರು.

ತಾಲೂಕಿನ ಹರಸೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘವು ಆಯೋಜಿಸಿದ “ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ” ಎಂಬ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಸರಕಾರಿ ಶಾಲೆಯಲ್ಲಿ ಕಲಿತ ಅನೇಕ ಜನರು ಇತಿಹಾಸ ನಿರ್ಮಾಣ ಮಾಡುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ. ಸರಕಾರಿ ಶಾಲೆ ಎಂದರೆ ಕೆಲವು ಜನರಿಗೆ ಕೀಳರೆಮೆ  ತೋರುತ್ತಿರುವುದು ವಿಷಾಧಕರ ಸಂಗತಿ. ಸರಕಾರವು ಕೂಡ ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಸಲಹೆ ನೀಡಿದರು.

Contact Your\'s Advertisement; 9902492681

ಮುಖ್ಯ ಅತಿಥಿಗಳಾಗಿ ಹರಸೂರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹನೀಫ್ ಮುಲ್ಲಾ ಅವರು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ “ಸಾಧಕ ರತ್ನ” ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತ್ತಾ ಕೇವಲ ನಗರಕ್ಕೆ ಸೀಮಿತವಾದ ಹಲವಾರೂ ಕಾರ್ಯಕ್ರಮಗಳ ಮಧ್ಯದಲ್ಲಿ ಸ್ನೇಹ ಸಂಗಮ ವಿವಿಧೋದ್ದೇಶ  ಸೇವಾ ಸಂಘವು ಗ್ರಾಮೀಣ ಮಟ್ಟದಲ್ಲಿ ವಿಶೇಷವಾಗಿ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಮೂಲಭೂತ ಸಮಸ್ಯೆಗಳು ಪರಿಹರಿಸುವ  ಕಾರ್ಯಕ್ರಮವಾಗಿದೆ. ಸಂಘವು ಗುಣಮಟ್ಟದ ಶಿಕ್ಷಣಕ್ಕೆ  ಬೆಳಕು ಚೆಲ್ಲುವ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದು ಮಾರ್ಮಿಕವಾಗಿ ನುಡಿದರು.

ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕೇವಲ ನಗರಕ್ಕೆ, ಜಾತಿಗೆ ಸೀಮಿತವಾದ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿ ಸರ್ಕಾರಿ ಶಾಲೆಯಲ್ಲಿ ಪ್ರಶಸ್ತಿ ನೀಡುವುದರೊಂದಿಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಕಾರ್ಯಕ್ರಮದಲ್ಲಿ ಎಲ್ಲರೂ ಸಮಾಲೋಚನೆ ಮೂಲಕ ಸಮಸ್ಯೆಗಳ  ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಇಲ್ಲಿಂದ ಪ್ರಾರಂಭವಾದ ರಥ ಹಲವಾರು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ಕಾರ್ಯಕ್ರಮ ಮಾಡುವುದರೊಂದಿಗೆ, ಎಲ್ಲಾ ಸರ್ಕಾರಿ ಶಾಲೆಯ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ  ಜಿಲ್ಲಾಧಿಕಾರಿಯವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಆಟದ ಮೈದಾನ, ಹಾಗೂ ಕೋಣೆಗಳಲ್ಲಿ ಫ್ಯಾನಿನ ವ್ಯವಸ್ಥೆ, ಮೂಲಭೂತ ಸಮಸ್ಯೆಗಳಿಗೆ ಪರಿಹರಿಸಲು ನಾಳೆಯಿಂದಲೇ ಕಾರ್ಯ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.  ಹರಸೂರ ಸರಕಾರಿ ಪ್ರೌಢಶಾಲೆಯ ಯಲ್ಲಿ ಇದೇ ವರ್ಷ 10ನೇ ತರಗತಿಯ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯಾದ ಮಹಾಲಕ್ಷ್ಮಿ ಬಸವರಾಜ ಸರಡಗಿ, ಪ್ರಶಾಂತ ಯಲ್ಲಪ್ಪ ಬಿಲ್ಕರ್, ತಾವರಗೇರಾ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪ್ರಿಯಾಂಕಾ ಹಿರಗಣ್ಣ ಮುಗ್ಟಿ, ರುಕ್ಮಿಣಿ ಮಲ್ಲಣ್ಣ ಪೂಜಾರಿ ಇವರಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷರಾದ ಮಂಜುಳಾ  ಜಮಾದಾರ, ತಾವರಗೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶಿವಾಜಿ ಚವಾಣ,  ಜನಪದ ಕಲಾವಿದ ರಾಜು ಹೆಬ್ಬಾಳ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಗಂಗೂಬಾಯಿ ನಂದ್ಯಾಳ ಆಗಮಿಸಿದರು. ಮುಖ್ಯ ಗುರುಗಳಾದ ರಮಾಬಾಯಿ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ರೇಣುಕಾ ಕುಲಕರ್ಣಿ, ವಿಜಯಲಕ್ಷ್ಮಿ, ಜ್ಯೋತಿ ಎಸ್, ಶಾಹೀನ ಸುಲ್ತಾನಾ, ಜ್ಯೋತಿ ಎಮ್, ಅಶೋಕ, ಸಂಪತಕುಮಾರ, ರವೀಂದ್ರ ಹಾಗೂ ಶಿಕ್ಷಣ ಪ್ರೇಮಿ ಬಸವರಾಜ ಸಮಾಳ, ಅಶೋಕ ಹೇಡಗುಂಪಿ, ಕರಬಸಪ್ಪ ಸರಡಗಿ ಸೇರಿದಂತೆ ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here