ಶಹಾಬಾದ: ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 150 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಶಹಾಬಾದ ನಗರದ ಪೆÇಲೀಸರು ವಶಪಡಿಸಿಕೊಂಡಿದ್ದಾರೆ.
ಬಡವರ ಪಾಲಾಗಬೇಕಾಗಿದ್ದ ಪಡಿತರ ಅಕ್ಕಿ ವಿತರಿಸದೇ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಡಿವಾಯ್‍ಎಸ್‍ಪಿ ಶಂಕರಗೌಡ ಪಾಟೀಲ ಹಾಗೂ ಪಿಐ ನಟರಾಜ ಲಾಡೆ ಅವರು ವಾಹನವನ್ನು ನಗರದ ವಾಡಿ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ.ಅಲ್ಲದೇ ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಟ್ರಕ್ನಲ್ಲಿ ಸುಮಾರು150 ಕ್ವಿಂಟಾಲ್ ಪಡಿತರ ಅಕ್ಕಿಯ ಚೀಲವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಹಾಬಾದನ ಜುನೈದ ಎಂಬಾತ ಶಹಾಬಾದದಿಂದ ಉಮರ್ಗಾ ಕಡೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಉಮರ್ಗಾ ಅಕ್ಕಿ ಗೋಡಾನ ಮಾಲೀಕನ ವಿರುದ್ಧ ಶಹಬಾದ ನಗರ ಪೆÇಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ.
ಈ ಕಾರ್ಯಚರಣೆಯಲ್ಲಿ ಪಿಎಸ್‍ಐ ಶಿವರಾಯ, ಸಿಬ್ಬಂದಿ ಗುಂಡಪ್ಪ, ಶ್ರೀಕಾಂತ್ ಉಪಳಪ್ಪ ಮತ್ತು ಆಹಾರ ಇಲಾಖೆಯ ನಿರ್ದೇಶಕರಾದ ಶ್ರೀಕಾಂತ್ ಮತ್ತು ಮಂಜು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…