ಬಿಸಿ ಬಿಸಿ ಸುದ್ದಿ

ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ರಾಜ್ಯ ಸದಸ್ಯರಾಗಿ ಮೋಹನ್ ಕುಮಾರ್ ದಾನಪ್ಪ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ರಾಜ್ಯ ಸದಸ್ಯರಾಗಿ ಮೋಹನ್ ಕುಮಾರ್ ದಾನಪ್ಪರವರನ್ನ ರಾಜ್ಯಪಾಲರ ಆದೇಶಾನುಸಾರ ನೇಮಕ ಮಾಡಿ ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿನ ಲಾಕಪ್ ಡೆತ್. ಅಕ್ರಮ ಬಂಧನ ಪ್ರಕರಣ, ಗಂಭೀರ ಗಾಯ, ಠಾಣೆಗೆ ಕರೆದು ಹಿಂಸೆ ನೀಡಿದರೆ, ಹಣ ಅಥವಾ ವಸ್ತುಗಾಗಿ ಬೇಡಿಕೆ. ಪೊಲೀಸರು ಬೆದರಿಕೆಯನ್ನು ಒಡ್ಡಿದರೆ. ಕಿರುಕುಳ, ಭೂಕಬಳಿಕೆ. ಅಧಿಕಾರ ದುರುಪಯೋಗ ಕರ್ತವ್ಯ ಲೋಪ ಅಥವಾ ನಿರ್ಲಕ್ಷ್ಯ ಸೇರಿದಂತೆ ಪೊಲೀಸರ ಗಂಭೀರ ದುರ್ನಡತೆ ಪ್ರಕರಣಗಳನ್ನು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸುವುದು ಪ್ರಾಧಿಕಾರದ ಕಾರ್ಯವಾಗಿರುತ್ತದೆ.

ಮೂಲತಃ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ಕಂಪ್ಲಿ ಪಟ್ಟಣದ ನಿವಾಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎ.ಸಿ.ದಾನಪ್ಪನವರ ಪುತ್ರರಾದ ಮೋಹನಕುಮಾ‌ರ್ ದಾನಪ್ಪನವರು ಸದ್ಯ ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದು ಬೆಂಗಳೂರಿನಲ್ಲಿ ವಕೀಲ ವೃತ್ತಿ ಆರಂಭಿಸುವ ಮುನ್ನ ಇವರು ಹೊಸಪೇಟೆ, ಕೊಪ್ಪಳ ಜಿಲ್ಲೆಗಳಲ್ಲಿ ವಕೀಲ ವೃತ್ತಿ ಮಾಡುತ್ತಿರುವುದರ ಜೊತೆಗೆ ಹಲವಾರು ಸಂಘಟನೆಗಳೊಂದಿಗೆ ಅದರಲ್ಲೂ ವಿಶೇಷವಾಗಿ ಭಾರತೀಯ ದಲಿತ ಪ್ಯಾಂಥರ್ಸ್ ಸಂಘಟನೆಯಲ್ಲಿ ಗುರುತಿಸಿಕೊಂಡು ಆರೋಗ್ಯ, ಶೈಕ್ಷಣಿಕ, ಬಡತನಾ ನಿರ್ಮೂಲನೆಯಂತಹ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಹೋರಾಟಗಳು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಹಾಗೂ ಸರ್ಕಾರಿ ಸೇವೆಯಲ್ಲಿದ್ದರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿಗಾಗಿ ರಾಷ್ಟ್ರಮಟ್ಟದಲ್ಲಿ ಮ್ಯಾರಥಾನ್ ಓಟ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದು ಇವರ ಜಾಗೃತಿ ಕಾರ್ಯಗಳು ವಿಶ್ವದ ಹಲವಾರು ದಾಖಲೆ ಪುಸ್ತಕಗಳಲ್ಲಿ ಸೇರಿರುತ್ತದೆ, ಇವರ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿ ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು, ರಾಜ್ಯದ ಹಿರಿಯ ಅಧಿಕಾರಿಗಳು ಅಭಿನಂದಿಸಿರುತ್ತಾರೆ.

ಅಲ್ಲದೆ ಹಲವಾರು ಸಂಘ- ಸಂಸ್ಥೆಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ, ಇದೀಗ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ರಾಜ್ಯ ಸದಸ್ಯರಾಗಿ ನೇಮಕವಾಗುವ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ, ಇವರನ್ನು ಜಿಲ್ಲೆಯ ಹಲವಾರು ಸಂಘ-ಸಂಸ್ಥೆಗಳು ಅಭಿನಂದಿಸಿವೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago