ಸೇಡಂ: ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರ `ಚಂದ್ರಶಿಕಾರಿ’ ಗ್ರಂಥಕ್ಕೆ ಕಲಬುರಗಿ ಜಿಲ್ಲೆಯ ಶ್ರೀ ಸುಭಾಷಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ನೀಡುವ `ಬಸವ ಪುರಸ್ಕಾರ’ ಲಭಿಸಿದೆ.
ಕಳೆದ ಆರು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ಸಾಧಕರಿಗೆ ಬಸವ ಪುರಸ್ಕಾರ ನೀಡಿ ಗೌರವಿಸುತ್ತಿರುವ ಕಲಬುರಗಿ ಜಿಲ್ಲೆಯ ಪಾಳಾ ಗ್ರಾಮದ ಸುಭಾಷಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ಪ್ರಸಕ್ತ ಸಾಲಿನ ಪುರಸ್ಕಾರಕ್ಕೆ ರಾಜ್ಯಮಟ್ಟದಲ್ಲಿ 14 ಜನರಲ್ಲಿ ಮಹಿಪಾಲರೆಡ್ಡಿ ಅವರೂ ಒಬ್ಬರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ತಿಳಿಸಿದ್ದಾರೆ.
ನೃಪತುಂಗ ನೆಲವಾದ ಸೇಡಂನ ಮಹಿಪಾಲರೆಡ್ಡಿ ಮುನ್ನೂರ್ ಅವರು ಬರೆದಿರುವ `ಚಂದ್ರಶಿಕಾರಿ’ ಜೀವನ ಕಥನ ಗ್ರಂಥ ಆಯ್ಕೆಯಾಗಿದ್ದು, ಜೂನ್ 16 ರಂದು ಕಲಬುರಗಿಯ ಅಪ್ಪಾ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಲಿರುವ ಶರಣ ಸಾಹಿತ್ಯ ಮತ್ತು ಸಾಂಸ್ಕøತಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿಯ ಕನ್ನಡ ಅಧ್ಯಯನ ಸಂಸ್ಥೆಯಿಂದ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಇದೇ `ಚಂದ್ರಶಿಕಾರಿ’ ಕೃತಿಗೆ ಅತ್ಯುತ್ತಮ ಜೀವನ ಕಥನ ಪ್ರಶಸ್ತಿಯನ್ನು ಕಳೆದ ಮಾರ್ಚ್ ತಿಂಗಳಲ್ಲಿ ಪಡೆದುಕೊಂಡಿದ್ದು, ಇದೀಗ ಅದೇ ಕೃತಿಯು `ಬಸವ ಪುರಸ್ಕಾರ’ಕ್ಕೆ ಭಾಜನವಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…