ಕಲಬುರಗಿ : ಕನ್ನಡ ಸಾಹಿತ್ಯಕ್ಕೆ 12 ನೇ ಶತಮಾನದ ಬಸವಾದಿ ಶರಣರ ಕೊಡುಗೆ ಅಪಾರವಾಗಿದ್ದೂ , ಅವರ ವಚನಗಳ ಆಮೂಲಾಗ್ರ ಅಧ್ಯಯನ ನಡೆಯಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಚೇತನ್ ಆರ್ ರವರು ಹೇಳಿದರು.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ
ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನರಾದ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪಾ ರವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಲಬುರ್ಗಿ ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷರಾದ ಶರಣಗೌಡ ಪಾಟೀಲ್ ಪಾಳಾ, ಸಮ್ಮೇಳನದ ಸಂಚಾಲಕರಾದ ಪ್ರೊ. ಯಶವಂತರಾಯ ಅಷ್ಠಗಿ, ಸಾಹಿತಿ ಸುರೇಶ್ ಬಡಿಗೇರ, ನಾಲ್ಕು ಚಕ್ರ ತಂಡದ ಮುಖ್ಯಸ್ಥೆ ಮಾಲಾ ಕಣ್ಣಿ,ಅಂಬಾರಾಯ ಕೋಣೆ,ಶಿವಯೋಗಿ ಭಜಂತ್ರಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.