ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಾಗಿರೆಂದು ಸಿಎಂ ಸಿದ್ದರಾಮಯ್ಯನವರು ಇಂದು ಅಧಿಕಾರಗಳು, ಜನನಾಯಕರಿಗೆ ಸೂಚನೆ ನೀಡಿದ್ದಾರೆ.
ಇಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಅತ್ಯಂತ ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತನ್ನಿ, ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು. ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು. ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು. ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡುವಂತೆ ಸೂಚಿಸಿದರು.
ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಿ ಎಂದರಲ್ಲದೆ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.
ಈಗ ಅನುಮೋದನೆಯಾದ ಟೆಂಡರ್ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು . ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು . ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಕೆಕೆಆರ್‌ಡಿಬಿ ನವೀನ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಖುಷ್: ಸಭೆಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ತಾವು ಅಧ್ಯಕ್ಷರಾದ ನಂತರದ 10 ತಿಂಗಳಲ್ಲಿ ಕೈಗೊಂಡ ಯೋಜನೆಗಳು, ಪ್ರಗತಿ ವಿಷಯಗಳನ್ನೆಲ್ಲ ಪಟ್ಟಿ ಮಾಡಿ ಮಾಹಿತಿ ನೀಡಿದರು. 3 ಸಾವಿರ ಕೋಟಿ ರು ಮೊತ್ತದಲ್ಲ 2009 ಕೋಟಿ ರು ವೆಚ್ಚವಾಗಿದ್ದ ಉಳಿದ ಹಣವನ್ನು 3 ತಿಂಗಳಲ್ಲಿ ಟೆಂಡರ್ ಕರೆದು ವೆಚ್ಚ ಮಾಡಲಾಗುತ್ತದೆ. ಬೇಗ ಕ್ರಿಯಾ ಯೋಜನೆ ಸಿದ್ಧಪಡಿಸುವ ಮೂಲಕ ಅಭಿವೃದ್ಧಿಗೆ ವೇಗ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಕೆಕೆಆರ್‌ಡಿಬಿಯ ಕೆಲಸಕಾರ್ಯಗಳನ್ನು ಮೆಚ್ಚಿಕೊಂಡ ಸಿಎಂ ಸಿದ್ದರಾಮಯ್ಯ ಬರುವ ದಿನಗಳಲ್ಲಿ ಆದ್ಯತೆ ವಲಯಗಳಿಗೆ ಗಮನ ಹರಿಸುವಂತೆ ಸೂಚಿಸಿದರು. ತೋಟಗಾರಿಕೆ, ಕೃಷಿ ಹಾಗೂ ಅಂತರ್ಜಲ ಮಟ್ಟದ ಅಭಿವೃದ್ಧಿಗೂ ಆದ್ಯತೆ ನೀಡುವಂತೆ ಸೂಚಿಸಿದರು
ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು
ಈಗ ಅನುಮೋದನೆಯಾದ ಟೆಂಡರ್ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು
ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು . ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು . ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಲಾಯಿತು
ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ . ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ತೀರ್ಮಾನಿಸಲಾಯಿತು
ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು
ಅರಣ್ಯೀಕರಣಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಪ್ತ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಖಡಕ್ ಸೂಚನೆ: ಸಭೆಯಲ್ಲಿ ಕಲ್ಯಾಣದ 7 ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಇೆಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು. ಕಲ್ಯಾಣ ಹಿಂದುಲಿದ ಪ್ರಗೇಶ. ಅಲ್ಲಿನ ಪ್ರಗತಿ ಕೆಲಸಗಳನ್ನು ತಾವು ಖುದ್ದು ನೋಡಿಬಂದು ಸಲಹೆ- ಸೂಚನೆ ಕೊಡಬೇು. ನೀವು ಅಲ್ಲಿಗೆ ಹೋಗೋದೇ ಅಪರೂಪ ಎಂದು ಹೇಳುತ್ತ ಸದಾಕಾಲ ಆ ಪ್ರದೇಶದ ಹೊಣೆ ಹೊತ್ತ ಜಿಲಲೆಗಲಿಗೆ ಭೇಟ ನೀಡಿ ಪರಿಶೀಲನೆ ನಡೆಸಲು ಸೂಚಿಸಿದರು.
ಅಂಗನವಾಡಿ, ಹಾಸ್ಟೆಲುಗಳು, ಶಾಲೆಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಯದರ್ಶಿಗಳ ನಡುವೆ ಸಮನ್ವಯ ಬೇಕು ಎಂದರು.
ಸಭೆಯಲ್ಲಿ ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಸಿಂಗ್, ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ, ಡಿ.ಸುಧಾಕರ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…