ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಗೆ 5 ಸಾವಿರ ಕೋಟಿ ಕ್ರಿಯಾ ಯೋಜನೆ

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆರೋಗ್ಯ, ಶಿಕ್ಷಣ, ಹಾಗೂ ಉದ್ಯೋಗ ಸೃಷ್ಟಿಸುವ ಪ್ರಸ್ತಾವನೆ ಮಾಡಿದ ಸಚಿವ ಶರಣ್ ಪ್ರಕಾಶ್ ಪಾಟೀಲ್

ಮುಖ್ಯಾಂಶಗಳು

  • ಎಲ್ಲ ಪ್ರಸ್ತಾವನೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ
  • ಸಿ.ಎಂ ಜೊತೆ ಕಲ್ಯಾಣ ಕರ್ನಾಟಕ ಪ್ರಗತಿ ಪರಿಶೀಲನೆ ಸಭೆ
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಗೆ 5 ಸಾವಿರ ಕೋಟಿ ಕ್ರಿಯಾ ಯೋಜನೆ
  • ಜು.15ರೊಳಗೆ ಕ್ರಿಯಾ ಯೋಜನೆ ಸಿದ್ದಪಡಿಸಲು ತಯಾರಿ
  • ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು

ಬೆಂಗಳೂರು; ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬೃಹತ್ ಕೌಶಲ್ಯಭಿವೃದ್ದಿ ಕೇಂದ್ರ ಸ್ಥಾಪನೆ, ಆರೋಗ್ಯ, ಶಿಕ್ಷಣ, ಹಾಗೂ ಉದ್ಯೋಗ ಸೃಷ್ಟಿಸುವ ಪ್ರಸ್ತಾಪನೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರಮುಖ ಭಾಗದಲ್ಲಿ ಬೃಹತ್ ಕೌಶಲ್ಯಭಿವೃದ್ದಿ ಕೇಂದ್ರವನ್ನು ಸ್ಥಾಪನೆ ಮಾಡಬೇಕು ಎಂದು ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡರು.

ಇದಕ್ಕೆ ತತ್ ಕ್ಷಣವೇ ಸ್ಪಂದಿಸಿದ ಸಿದ್ದರಾಮಯ್ಯ ಅವರು ಈ ಕುರಿತು ಕೂಡಲೇ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉದ್ಯೋಗ ಹುಡುಕಿಕೊಂಡು ದೂರದ ಹೈದರಾಬಾದ್, ಪುಣೆ, ಮುಂಬಯಿ ಸೇರಿದಂತೆ ಹೊರ ರಾಜ್ಯದ ಭಾಗಗಳಿಗೆ ಹೋಗುತ್ತಾರೆ. ಕೌಶಲ್ಯಭಿವೃದ್ದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿವಿಧ ಇಲಾಖೆಗಳಲ್ಲಿ ಅನೇಕ ಸರಕಾರಿ ಹುದ್ದೆಗಳು ಖಾಲಿ ಇವೆ. ಇವುಗಳು ಆದ್ಯತೆ ಮೇರೆಗೆ ಭರ್ತಿ ಮಾಡುವಂತೆಯೂ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ಹುದ್ದೆಗಳು ಭರ್ತಿಗೆ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸುವಂತೆಯೂ ಕೋರಿದರು. ಇದಕ್ಕೂ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತಿಕ್ ಅವರಿಗೆ ಯಾವ ಯಾವ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ ಎಂಬುದರ ಪಟ್ಟಿ ಸಿದ್ದಪಡಿಸಿ ಅದಷ್ಟು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಕಟ್ಟಡದ ಸೂಚನೆ ಕೊಟ್ಡರು.

ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಹಾಗೂ ಪದವಿ ಕಾಲೇಜುಗಳ ನಿರ್ಮಾಣಕ್ಕೆ ಪ್ರಥಮ ಆಧ್ಯತೆ ನೀಡಲು ಪಾಟೀಲ್
ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಅವರು ಈ ಕುರಿತು ಕೂಡಲೇ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್.ಎಸ್. ಭೋಸರಾಜು, ಶಿವರಾಜ್ ತಂಗಡಗಿ, ಡಿ.ಸುಧಾಕರ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

8 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

19 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

19 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

21 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

21 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

21 hours ago