ಬಿಸಿ ಬಿಸಿ ಸುದ್ದಿ

ಕನ್ನಡ ಕಟ್ಟುವ ಕಾಯಕ ಸಮ್ಮೇಳನಗಳಿಗೆ ಸೀಮಿತವಾಗದಿರಲಿ; ಬಿಳಿಮಲೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಿಗೆ ಅಭಿನಂದನೆ

 

ಬೆಂಗಳೂರು: ಕನ್ನಡ ನಾಡಿನಲ್ಲಿ ಕನ್ನಡದ ಅಭಿವೃದ್ಧಿಯ ಕಾಯಕವೆಂದರೆ ಕೇವಲ ಸಮ್ಮೇಳನಗಳನ್ನು ಮಾಡುವುದಕ್ಕೆ ಸೀಮಿತವಾಗದೆ ಸಮಗ್ರ ಸಮಸ್ಯೆಗಳಿಗೆ ಸ್ಪಂದನೆ ನೀಡಿ ಆಮೂಲಾಗ್ರವಾಗಿ ಕನ್ನಡ ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ (ಜೂನ್ 14ರಂದು) ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ನಂತರ ಕಾಸರಗೋಡಿನ ಕನ್ನಡಪರ ಚಿಂತಕರು ಹಾಗೂ ಸಿನಿಮಾ ಪತ್ರಕರ್ತರಾದ ಬಿ ಎನ್ ಸುಬ್ರಹ್ಮಣ್ಯ ಹಾಗೂ ಕಾಸರಗೋಡಿನ ಕನ್ನಡ ಹೋರಾಟದ ಬಗ್ಗೆ ಅಧ್ಯಯನ ನಡೆಸಿದ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿಗಳಾದ ಡಾ. ಸದಾನಂದ ಪೆರ್ಲ ಅವರ ಜೊತೆ ಮಾತುಕತೆ ನಡೆಸಿ ಮಾತನಾಡಿದ ಅವರು ಕೇವಲ ಸಮ್ಮೇಳನಗಳನ್ನು ಮಾಡುವುದರ ಮೂಲಕ ರಾಜಧಾನಿಯ ಕೆಲವೊಂದು ಜನರನ್ನು ಮಾತ್ರ ಅತಿಥಿಗಳನ್ನಾಗಿ ಆಹ್ವಾನಿಸಿ ಹೊರನಾಡು, ಗಡಿನಾಡು ಸೇರಿದಂತೆ ಇರುವ ಕನ್ನಡಿಗರು ಸೇವಾ ಮನೋಭಾವದಿಂದ ಅವರ ಕೆಲಸ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ. ಅದಕ್ಕಾಗಿ ಸಮ್ಮೇಳನಗಳು ಮಾತ್ರ ಮುಖ್ಯವಾಗದೆ ಸಮಗ್ರವಾಹಿಕನ್ನಡದ ಏಳ್ಗೆ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಮಸ್ತ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವುದಲ್ಲದೆ ಕನ್ನಡದ ಜಾಗೃತಿಯನ್ನು ಮೂಡಿಸಿ ಕನ್ನಡ ವಾತಾವರಣವನ್ನು ಸೃಷ್ಟಿಸುವ ಕೆಲಸ ಮಾಡಬೇಕಾಗುತ್ತದೆ.

ಅದಕ್ಕಾಗಿ ನನ್ನ ಅವಧಿಯಲ್ಲಿ ವಿಸ್ತೃತವಾದ ಕಾರ್ಯ ಯೋಜನೆಗಳನ್ನು ರೂಪಿಸಿ ಕನ್ನಡಿಗರೆಲ್ಲರೂ ಕನ್ನಡಕ್ಕಾಗಿ ದುಡಿಯುವಂತೆ ಪ್ರಯತ್ನಿಸಲಾಗುವುದು. ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಳಿಗೆಗಳನ್ನು ಅಲ್ಲಲ್ಲಿ ತೆರೆದು ಕನ್ನಡಿಗರಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಹೊರ ತಂದ ಕನ್ನಡ ಕೃತಿಗಳು ಲಭ್ಯವಾಗುವಂತೆ ಮಾಡಲು ಚಿಂತನೆ ನಡೆದಿದೆ.

ಇದರಿಂದ ಪುಸ್ತಕ ಮಳಿಗೆಗಳಲ್ಲಿ ಕನ್ನಡದ ಸಾಹಿತಿಗಳು ಕನ್ನಡಾಭಿಮಾನಿಗಳು ಒಟ್ಟು ಸೇರುವ ಅಪೂರ್ವ ಅವಕಾಶವಿದೆ. ಗಡಿನಾಡು, ಹೊರನಾಡು ಹಾಗೂ ಕನ್ನಡ ನಾಡಿನಲ್ಲಿರುವ ಪ್ರವಾಸ ಮಾಡಿ ಮೂಲ ಸಮಸ್ಯೆ ತಿಳಿಯಲು ಪ್ರಯತ್ನಿಸಲಾಗುವುದು.

ಈಗಾಗಲೇ ಒಂದು ವರ್ಷ ಕಳೆದು ಹೋಗಿರುವುದರಿಂದ ಉಳಿದ ಅವಧಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಇನ್ನಷ್ಟು ಕ್ರಿಯಾಶೀಲವಾಗಿಸಿ ಕನ್ನಡಿಗರ ಆಶಾಕಿರಣದ ಪ್ರಾಧಿಕಾರವನ್ನಾಗಿ ಕಟ್ಟುವ ಗುರಿಯಿದೆ.ಇದಕ್ಕೆ ಸಮಸ್ತ ಕನ್ನಡಿಗರು ಕೈಜೋಡಿಸಬೇಕಾಗಿದೆ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಇದಕ್ಕೆ ವಿಸ್ತೃತ ರೂಪ ನೀಡಲು ಮುಂದಿನ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಕನ್ನಡ ಕಟ್ಟುವ ಕಾಯಕ ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದರು.

ಕನ್ನಡ ನಾಡಿನ ಗಡಿ ಜಿಲ್ಲೆಗಳು ಮುಖ್ಯವಾಗಿ ಕಾಸರಗೋಡು, ಕಲಬುರ್ಗಿ ರಾಯಚೂರು, ಬೀದರ್, ಬಳ್ಳಾರಿ ಕಾರವಾರ ಮುಂತಾದೆಡೆಗಳಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಒತ್ತು ಕೊಡಲಾಗುವುದು ಎಂದು ಹೇಳಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago