ಬಿಸಿ ಬಿಸಿ ಸುದ್ದಿ

ಡೀಸೆಲ್ ,ಪೇಟ್ರೋಲ್ ಬೇಲೆ ಏರಿಕೆ ಬಾಲರಾಜ್ ಗುತ್ತೇದಾರ ಕಿಡಿ

ಕಲಬುರಗಿ :ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣೀ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ 3 ರೂ ಹಾಗೂ ಡೀಸೆಲ್ ಮೇಲೆ 3.50 ರೂ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ.

ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಜೆಡಿಎಸ್ ಪಕ್ಷವಯ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಜೆಡಿಎಸ್ ಪಕ್ಷ ಬೀದಿಗಿಳಿದು ಹೋರಾಡಲಿದೆ ಎಂದರು.

emedialine

Recent Posts

ಸಡಗರ – ಸಂಭ್ರಮದಿಂದ ಜರುಗಿದ ಭಂಕೂರಿನ ಬಂಡಿ ಓಡಿಸಿ ಕರಿ ಹರಿಯುವ ಜಾತ್ರೆ

ಶಹಾಬಾದ: ತಾಲೂಕಿನ ಭಂಕೂರ ಗ್ರಾಮದ ಗ್ರಾಮ ದೇವತೆಯಾದ ಕೆರಿಯಮ್ಮ ದೇವಿಯ ಜಾತ್ರೆಯಲ್ಲಿ ಮಂದಿರದ ಪಕ್ಕದಲ್ಲಿರುವ ಗುಡ್ಡದಿಂದ ಬಂಡಿ ಓಡಿಸಿ ಹಾಗೂ…

10 hours ago

ಶರಣು ಮೋದಿಗೆ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆಗೆ ಮನವಿ

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ, ಪಾಲಿಕೆಯ ಮಾಜಿ ಮೇಯರಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ…

10 hours ago

ಸಮಾಜ ಸುಧಾರಕ ಕಬೀರದಾಸರ 647ನೇ ಜಯಂತಿ ಆಚರಣೆ

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಕಬೀರದಾಸರ 647ನೆಯ ಜಯಂತಿಯನ್ನು ಆಚರಿಸಲಾಯಿತು. ಈ…

10 hours ago

ಶೆಳ್ಳಗಿ ರಸ್ತೆ ದುರಸ್ತಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ

ಸುರಪುರ: ತಾಲೂಕಿನ ಶೆಳ್ಳಗಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ…

10 hours ago

ಸುರಪುರ ಕುಂಬಾರ ಸಂಘ ಶಾಸಕ ಆರ್.ವಿ.ನಾಯಕ ಸನ್ಮಾನ

ಸುರಪುರ: ತಾಲೂಕ ಕುಂಬಾರ ಸಂಘದ ವತಿಯಿಂದ ನೂತನ ಶಾಸಕ ರಾಜಾ ವೇಣುಗೊಪಾಲ ನಾಯಕಗೆ ಸನ್ಮಾನಿಸಿ ಗೌರವಿಸಲಾಗಿದೆ.ನಗರದ ಶಾಸಕರ ಗೃಹ ಕಚೇರಿಯಲ್ಲಿ…

10 hours ago

ಮಹಾವಿದ್ಯಾಲಯ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್, ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು…

10 hours ago