ಗುಲಬರ್ಗಾ ವಿವಿಯ ನೂತನ ಕುಲಸಚಿವರಾಗಿ ಸೋಮಲಿಂಗಪ್ಪ ಗೆಣ್ಣೂರು ನೇಮಕ

0
116

ಕಲಬುರಗಿ : ಗುಲಬರ್ಗಾ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಸೋಮಲಿಂಗಪ್ಪ ಗೋಪಾಲ ಗೆಣ್ಣೂರ ಇಂದು ಅಧಿಕಾರ ವಹಿಸಿಕೊಂಡರು.

ಇವರು ಇದಕ್ಕೂ ಮೊದಲು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಬಾರಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೌಲ್ಯ ಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ ಅವರು ಅಧಿಕಾರ ಹಸ್ತಾಂತರಿಸಿ ಪುಷ್ಪಗುಚ್ಚ ನೀಡಿ ಶುಭಕೋರಿದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here