ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರಗೆ ನೇಷನ್ ಬಿಲ್ಡರ್ ಪ್ರಶಸ್ತಿ

0
27

ಕಲಬುರಗಿ: ಇನ್ನರ್ ವ್ಹಿಲ್ ಸಂಸ್ಥೆ ವತಿಯಿಂದ ನೀಡುತ್ತಿರುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಲಬುರಗಿ ಇನ್ನರ್ ವ್ಹಿಲ್ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಮುರಳಿಧರ್ ಹಾಗೂ ಕಾರ್ಯದರ್ಶಿ ಶ್ರೀಲತಾ ದೊಂಟಿ ಅವರು ತಿಳಿಸಿದ್ದಾರೆ.

ತಮ್ಮ ವಿಶಿಷ್ಟ ಪ್ರಯೋಗಗಳ ಮೂಲಕ ಪರಿಣಾಮಕಾರಿ ಶಿಕ್ಷಣವನ್ನು ನೀಡುತ್ತಾ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕ್ರಿಯಾಶೀಲ ಶಿಕ್ಷಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣಾ ಭಾವದಿಂದ ದುಡಿಯುತ್ತಿರುವ ಆದರ್ಶ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಲಾಗುತ್ತಿದೆ.

Contact Your\'s Advertisement; 9902492681

ನಾಳೆ ಬೆಳಿಗ್ಗೆ 10 ಗಂಟೆಗೆ ರೋಟರಿ ಕ್ಲಬ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here