ಬಿಸಿ ಬಿಸಿ ಸುದ್ದಿ

ಡೀಸೆಲ್ ,ಪೇಟ್ರೋಲ್ ಬೇಲೆ ಏರಿಕೆ ಪ್ರೀತಿ ಹೊನ್ನಗುಡಿ ಕಿಡಿ

ಬೆಂಗಳೂರು :ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರಾದ ಪ್ರೀತಿ ಎಸ್ ಹೊನ್ನಗುಡಿ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣೀ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ 3 ರೂ ಹಾಗೂ ಡೀಸೆಲ್ ಮೇಲೆ 3.50 ರೂ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ.

ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ.

ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಬೀದಿಗಿಳಿದು ಹೋರಾಡಲಿದೆವೆ ಎಂದರು.

emedialine

Recent Posts

ವಾಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್ ಅವರಿಗೆ ಸನ್ಮಾನ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…

8 hours ago

ಕಲಬುರಗಿ ಡಿ.ಸಿ. ವಿರುದ್ಧ ಸುಳ್ಳು ಆರೋಪ: ಕಾನೂನು ಕ್ರಮಕ್ಕೆ‌ ಒತ್ತಾಯಿಸಿದ ಭೀಮ್ ಅರ್ಮಿ ಮನವಿ

ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…

10 hours ago

ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ: ಪ್ರೀತಿ ಹೊನ್ನಗುಡಿ

ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…

10 hours ago

ಬಗರ್ ಹುಕುಂ ಅರ್ಜಿ ಕೂಡಲೆ ಇತ್ಯರ್ಥಪಡಿಸಿ; ತಹಶೀಲ್ದಾರರಿಗೆ ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…

10 hours ago

ಮಹಿಳೆಯರು ಶಿಕ್ಷಿತರಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ; ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕರೆ

ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ‌ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…

11 hours ago

ಬಲಿಷ್ಠ ರಾಷ್ಟ್ರ ಕಟ್ಟಲು ಗುಣಮಟ್ಟದ ಶಿಕ್ಷಣ ಅಗತ್ಯ; ಸರಡಗಿ ಶ್ರೀಗಳು

ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…

11 hours ago