ಶಹಾಬಾದ :ಜಿಲ್ಲೆಯಲ್ಲಿಯೇ ಎಲ್ಲರ ಜತೆಗೆ ಒಡನಾಟವನ್ನು ಹೊಂದಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸದಾಕಾಲ ಶ್ರಮಿಸುತ್ತಿರುವ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಅವರಿಗೆ ಪಕ್ಷ ಗುರುತಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವಿ ನರೋಣಿ, ತಾಲೂಕಾ ಹೂಗಾರ ಸಮಾಜದ ಅಧ್ಯಕ್ಷ ಬಸವಕುಮಾರ ಮಕಾಶಿ, ಕಾಂಗ್ರೆಸ್ ಮುಖಂಡರಾದ ಮಹ್ಮದ್ ಉಬೇದುಲ್ಲ, ರಾಜಮಹ್ಮದ್ ರಾಜಾ ಆಗ್ರಹಿಸಿದ್ದಾರೆ.
ತಾಪಂ ಸದಸ್ಯರಾಗಿ, ಜಿಪಂ ಸದಸ್ಯರಾಗಿರುವ ಜತೆಗೆ ಜಿಪಂ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿರುವ ಎಲ್ಲಾ ಅನುಭವ ಶಿವಾನಂದ ಪಾಟೀಲ ಹೊಂದಿದ್ದಾರೆ.ಅಲ್ಲದೇ ಇತ್ತಿಚಿಗಷ್ಟೇ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ ವಿರುದ್ಧ ಆರೋಗ್ಯಕರ ಪೈಪೋಟಿ ನೀಡುವ ಮೂಲಕ ಕೆಲವೇ ಅಂತರದ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ.ಆದರೆ ಎದುರಾಳಿಯವರನ್ನು ಬೆವರಿಳಿಸುವಂತೆ ಮಾಡಿದ್ದರು.
ಜಿಲ್ಲೆಯಲ್ಲಿ ಹಾಗೂ ವಿಶೇಷವಾಗಿ ಚಿತ್ತಾಪೂರ ತಾಲೂಕಿನಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಭಾಂಧವ್ಯವನ್ನು ಹೊಂದಿರುವ ಇವರು ಸಾಮಾಜಿಕ ,ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಯಾವಾಗಲೂ ಬೆಂಬಲಿಸುತ್ತಾ ಬಂದಿದ್ದಾರೆ.
ಈ ಭಾಗದಲ್ಲಿ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಂತೆ ಸಕ್ರೀಯವಾಗಿ ಪಾಲ್ಗೊಳ್ಳುತ್ತಾರೆ. ಇವರೊಬ್ಬ ಸಂಘಟನಾ ಚತುರ. ಆದ್ದರಿಂದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಶಿವಾನಂದ ಪಾಟೀಲ ಅವರ ಅನುಭವ, ಸಂಘಟನೆ ದೃಷ್ಟಿಯಿಂದ ಅವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ವರಿಷ್ಠರಿಗೆ ಆಗ್ರಹಿಸಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…