ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ USAನಲ್ಲಿ ಉನ್ನತ ಶಿಕ್ಷಣಕ್ಕೆ ಸಾಕಷ್ಟು ಅವಕಾಶವಿದೆ

0
33

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯವು ಅಟ್ಲಾಂಟಿಕ್ಸ್ ವಿಶ್ವವಿದ್ಯಾಲಯದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಹೇರಳ ಅವಕಾಶಗಳನ್ನು ಒದಗಿಸಿದೆ ಮತ್ತು ಅವರಿಗೆ USAನಲ್ಲಿ ಇಂಜಿನಿಯರಿಂಗ್ ಉನ್ನತ ಶಿಕ್ಷಣ ಪಡೆದುಕೊಳ್ಳಲು ವಿಶಾಲವಾದ ಮಾರ್ಗವನ್ನು ತೆರೆದಿದೆ ಎಂದು ಅಮೇರಿಕಾ ಅಟ್ಲಾಂಟಿಕ್ಸ್ ವಿಶ್ವವಿದ್ಯಾಲಯದ ವ್ಯವಸ್ಥಾಪಕ ನಿರ್ದೇಶಕ-ಂSIಂ ಕೈಲಾಶ ಚಿಂತಾಮಣಿ ಹೇಳಿದರು.

ಅವರು ಮಂಗಳವಾರ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ “ಜನರೇಟಿವ್ ಎಐ ಇನ್ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್” ಕುರಿತು ಒಂದು ದಿನದ ಅಂತರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

USಂ ಫೆÇ್ಲೀರಿಡಾದ ಮಿಯಾಮಿಯಲ್ಲಿರುವ ಅಟ್ಲಾಂಟಿಕ್ಸ್ ವಿಶ್ವವಿದ್ಯಾಲಯದಲ್ಲಿ ಒS ಕೋರ್ಸ್‍ಗೆ ಈಗಾಗಲೇ ಶರಣಬಸವ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ತಮ್ಮ ಮಾಸ್ಟರ್ ಆಫ್ ಸೈನ್ಸ್ (ಒS) ಕೋರ್ಸ್‍ಗೆ ಸೇರಿದ್ದಾರೆ. ಅಟ್ಲಾಂಟಿಕ್ಸ್ ವಿಶ್ವವಿದ್ಯಾಲಯದಲ್ಲಿ ಒS ಮಾಡುವ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯವು ಉಜ್ವಲವಾಗಿರುತ್ತದೆ ಎಂದು ಹೇಳಿದರು.

ಅಮೇರಿಕಾದಲ್ಲಿರುವ ಈ ವಿಶ್ವವಿದ್ಯಾಲಯದಲ್ಲಿ ನಿಯಮಿತ ತರಬೇತಿ ಜೊತೆಗೆ ವಿದ್ಯಾರ್ಥಿಗಳಿಗೆ ಆನ್‍ಲೈನ್ ಐಟಿ ತರಬೇತಿಯನ್ನು ಸಹ ನೀಡಲಾಗುವುದು ಮತ್ತು ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಉದ್ಯೋಗಾವಕಾಶಕ್ಕೂ ವಿಶ್ವವಿದ್ಯಾಲಯವು ಸಹಾಯ ಮಾಡುತ್ತದೆ ಎಂದು ಚಿಂತಾಮಣಿ ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಪ್ರಸ್ತುತ ಶತಮಾನವು ಆರ್ಟಿಫಿಶಿಯಲ್ ಇಂಟೆಲಿಜನ್ಸ್‍ಗೆ ಸಮರ್ಪಿತವಾಗಿದೆ. ಶರಣಬಸವ ವಿಶ್ವವಿದ್ಯಾಲಯವು ಪದವಿಪೂರ್ವ ಶಿಕ್ಷಣದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜನ್ಸ್ ಮತ್ತು ಮಷಿನ್ ಲರ್ನಿಂಗ್, ಆರ್ಟಿಫಿಶಿಯಲ್ ಇಂಟೆಲಿಜನ್ಸ್ ಮತ್ತು ಡೇಟಾ ಸೈನ್ಸ್ ಎರಡನ್ನೂ ಪ್ರಾರಂಭಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮಾರ್ಗಗಳನ್ನು ತೆರೆದಿದೆ. ನಮ್ಮ ವಿವಿಯಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಸವಾಲುಗಳನ್ನು ತೆಗೆದುಕೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಆರ್ಟಿಫಿಶಿಯಲ್ ಇಂಟೆಲಿಜನ್ಸ್ ಮತ್ತು ಡೇಟಾ ಸೈನ್ಸ್ ಸ್ನಾತಕೋತ್ತರ ಕೋರ್ಸ್‍ಗಳು ಪ್ರಾರಂಭವಾಗಿವೆ ಎಂದರು.

ಆರ್ಟಿಫಿಶಿಯಲ್ ಇಂಟೆಲಿಜನ್ಸ್‍ನಲ್ಲಿ ಇನ್ನೂ ಅನೇಕ ಕಾರ್ಯಕ್ರಮಗಳಿದ್ದು, ಹೊಸ ತಂತ್ರಜ್ಞಾನಗಳ ಜಗತ್ತಿಗೆ ಅಳವಡಿಸಿಕೊಂಡು ಸಂಬಂಧಿತ ಕ್ಷೇತ್ರಗಳಲ್ಲಿ ಕೋರ್ಸ್‍ಗಳನ್ನು ನೀಡುತ್ತೇವೆ ಎಂದು ಡಾ. ಬಿಡವೆ ಹೇಳಿದರು.

ಅಮೇರಿಕಾದ ಅಟ್ಲಾಂಟಿಕ್ಸ್ ವಿಶ್ವವಿದ್ಯಾಲಯ ಮತ್ತು ಜರ್ಮನಿ ಸೇರಿದಂತೆ ಇತರ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಶರಣಬಸವ ವಿಶ್ವವಿದ್ಯಾಲಯವು ಮಾಡಿಕೊಂಡಿರುವ ತಿಳುವಳಿಕಾ ಒಪ್ಪಂದವನ್ನು ಉಲ್ಲೇಖಿಸಿದ ಬಿಡವೆ, ಅಭಿವೃದ್ಧಿ ಹೊಂದಿದ ದೇಶಗಳ ವಿಶ್ವವಿದ್ಯಾಲಯಗಳೊಂದಿಗಿನ ತಿಳುವಳಿಕಾ ಒಪ್ಪಂದದ ಮುಖ್ಯ ಉದ್ದೇಶವು ಇತ್ತೀಚಿನ ಮತ್ತು ಸಂಬಂಧಿತ ಹೊಸ ತಂತ್ರಜ್ಞಾನಗಳೊಂದಿಗೆ, ಉನ್ನತ ಶಿಕ್ಷಣದಲ್ಲಿ ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೋರ್ಸ್‍ಗಳನ್ನು ತರುವುದಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ವಿಶ್ವವಿದ್ಯಾಲಯಗಳು ಇತ್ತೀಚಿನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು ಹೆಚ್ಚು ವೇಗವಾಗಿ ಅಳವಡಿಸಿಕೊಂಡಿವೆ. ಈ ತಂತ್ರಜ್ಞಾನಗಳು ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ. ಇದನ್ನು ನಿವಾರಿಸಲು ಶರಣಬಸವ ವಿಶ್ವವಿದ್ಯಾಲಯವು ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಶಿಕ್ಷಣವನ್ನು ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ನೀಡಲು ಈ ವಿಶ್ವವಿದ್ಯಾಲಯಗಳೊಂದಿಗೆ ತಿಳುವಳಿಕೆ ಒಪ್ಪಂದ ಮಾಡಿಕೊಂಡಿದೆ ಎಂದು ಅವರು ಹೇಳಿದರು.

ಖಾಸಗಿ ಏಜೆಂಟರು ಮತ್ತು ಸಲಹೆಗಾರರ ಸಹಾಯದಿಂದ ವಿದೇಶಗಳಲ್ಲಿ ಎಂಎಸ್ ಪದವಿ ಕೋರ್ಸ್‍ಗಳನ್ನು ಪ್ರವೇಶಿಸಲು ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ, ಶರಣಬಸವ ವಿಶ್ವವಿದ್ಯಾಲಯದ ಮೂಲಕ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎಂಎಸ್ ಪದವಿ ಕೋರ್ಸ್‍ಗಳಿಗೆ ಸೇರುವ ವಿದ್ಯಾರ್ಥಿಗಳು ಅತಿ ಕಡಿಮೆ ಹಣದಲ್ಲಿ ಪ್ರವೇಶ ಪಡೆಯುತ್ತಾರೆ ಎಂದು ಬಿಡವೆ ತಿಳಿಸಿದರು.

ಬೆಂಗಳೂರಿನ ಎಡ್ವೆಂಚರ್ಸ್‍ನ ನಿರ್ದೇಶಕರಾದ ಡಾ ಅರುಣ್ ಚಂದ್ರ ಮುದೋಳ್ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಕೋರ್ಸ್‍ಗಳಿಗೆ ಸೇರಲು ಸಾಲ ಸೌಲಭ್ಯಗಳು ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಈ ಕೋರ್ಸ್‍ಗಳಿಗೆ ಪ್ರವೇಶದ ಇತರ ವಿವರಗಳ ಕುರಿತು ಎಲ್ಲಾ ಪ್ರಮುಖ ವಿವರಗಳನ್ನು ಒದಗಿಸಿದರು. ಬಾಂಗ್ಲಾದೇಶದ ಢಾಕಾದಲ್ಲಿರುವ ಸ್ಮಾರ್ಟ್ ಯೂನಿವರ್ಸಿಟಿ ಇನ್ನೋವೇಶನ್ ಹಬ್‍ನಲ್ಲಿ ತರಬೇತುದಾರರಾದ ಶ್ರೀ ದಿಪೆಶ್ ಬಾನಿಕ್ ಅವರು “ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್‍ನಲ್ಲಿ ಜನರೇಟಿವ್ ಎಐ” ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ್, ನಿರ್ದೇಶಕ ಪೆÇ್ರ. ವಿ.ಡಿ.ಮೈತ್ರಿ, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಸಂಶೋಧನಾ ನಿರ್ದೇಶಕಿ ಡಾ. ಸುಜಾತಾ ಮಲ್ಲಾಪುರ, ಡೀನ್ ಇಂಜಿನಿಯರಿಂಗ್ ಟೆಕ್ನಾಲಜಿ (ಕೋ-ಎಡ್) ಡಾ. ಶಿವಕುಮಾರ ಜವಳಗಿ ಸೇರಿದಂತೆ ಇತರ ಪ್ರಮುಖರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here