ಸುರಪುರ: ಸರಕಾರ ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ನೀಡಿದೆ ರೈತರು ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ನಗರದ ಪಿಎಲ್‍ಡಿ ಬ್ಯಾಂಕ್‍ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ,ನಮ್ಮ ತಂದೆಯವರಾದ ರಾಜಾ ವೆಂಕಟಪ್ಪ ನಾಯಕ ಅವರು ಸದಾಕಾಲ ರೈತರಿಗಾಗಿ ನಿರಂತರವಾಗಿ ಶ್ರಮಿಸಿದ್ದರು,ಅವರ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ತಾವೆಲ್ಲರು ಸದಾಕಾಲ ಸಹಕಾರ ನೀಡುವಂತೆ ಮನವಿ ಮಾಡಿದರು.
ನಂತರ ಪಿಎಲ್‍ಡಿ ಬ್ಯಾಂಕ್ ವತಿಯಿಂದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಅನೇಕ ಜನ ರೈತರಿಗೆ ಪಿಎಲ್‍ಡಿ ಬ್ಯಾಂಕ್ ವತಿಯಿಂದ ನೀಡುವ ಸಾಲದ ಚೆಕ್‍ಗಳ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ್ ದೇವಾಪುರ,ಉಪಾಧ್ಯಕ್ಷ ನಿಂಗಣ್ಣ ಕೆಂಗುರಿ,ನಿರ್ದೇಶಕರಾದ ವಾಮನರಾವ್ ದೇಶಪಾಂಡೆ,ರಾಜಾ ಸುಭಾಶ್ಚಂದ್ರ ನಾಯಕ,ಬಸಣ್ಣ ಕಮತಗಿ ಕಕ್ಕೇರ,ವೆಂಕೋಬ ಸಾಹುಕಾರ ,ಬಸವರಾಜ ಬಾಗಲಿ,ಮಲ್ಲಣ್ಣ ಸಾಹುಕಾರ,ನಂದನಗೌಡ ಹೆಚ್.ಪಾಟೀಲ್,ಶರಣಗೌಡ ಪಾಟೀಲ್,ಶರಣಗೌಡ ಬಿರಾದಾರ,ಎಮ್.ಡಿ.ಯೂಸೂಫ್,ಶಾಂತಗೌಡ,ಸಿದ್ದನಗೌಡ,ರಾಜಶೇಖರ ದಾಯಗೊಡೆ,ನಿಂಗಣ್ಣ,ಶಿವರಾಜ,ತೋಟೆಂದ್ರ,ಶರಣಯ್ಯಸ್ವಾಮಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…