ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಆವಿಷ್ಕಾರ ಯೋಜನೆ ಜಾರಿ ವಿರೋಧಿಸಿ ಅಂಗನವಾಡಿ ನೌಕರರ ಸಂಘದ ಹೋರಾಟವು ಮಂಗಳವಾರ ಎರಡನೇ ದಿನಗಳಲ್ಲಿ ಮುಂದುವರೆದಿದ್ದು, ನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರ ನಿವಾಸದ ಮುಂದೆ ಕೈಗೊಂಡ ಧರಣಿಯಲ್ಲಿ ಅಂಗನವಾಡಿ ಶಿಕ್ಷಕಿ ಶ್ರೀಮತಿ ಜೈರುನೀಶಾ ಅವರು ತೀವ್ರ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಗರದ ನ್ಯೂ ರಹಿಮತ್ ನಗರದ ನಿವಾಸಿ ಜೈರುನೀಶಾ ಅವರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಸ್ಥಗಿತಗೊಂಡು ತಾನು ಎಲ್ಲಿ ತನ್ನ ಉದ್ಯೋಗ ಕಳೆದುಕೊಳ್ಳುತ್ತೇನೆ ಎಂಬ ಭೀತಿಗೆ ಒಳಗಾಗಿದ್ದರು ಎನ್ನಲಾಗಿದೆ. ಅದರಲ್ಲಿಯೂ ಬಿಸಿಲಿನ ತಾಪಮಾನದಿಂದಲೂ ಜೈರುನೀಶಾ ಅವರು ಬಳಲಿದ್ದರಿಂದ ತೀವ್ರ ನಿಶ್ಯಕ್ತಳಾಗಿ ಕಣ್ಣುಗಳನ್ನು ಮುಚ್ಚಿ ಅಸ್ವಸ್ಥಗೊಂಡಿದ್ದರಿಂದ ತಕ್ಷಣವೇ ಇತರೆ ಸಹುದ್ಯೋಗಿಗಳು ಹಾಗೂ ಹೋರಾಟಗಾರರು ಅವರನ್ನು ಬಸವೇಶ್ವರ್ ಆಸ್ಪತ್ರೆಗೆ ದಾಖಲಿಸಿದರು.
ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸುವುದನ್ನು ವಿರೋಧಿಸಿ ಕಲ್ಯಾಣ ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಕೊಪ್ಪಳ್ ಜಿಲ್ಲೆಗಳಲ್ಲಿ ಮೊದಲ ಹಂತದ ಹೋರಾಟವನ್ನು ಆರಂಭಿಸಿದ್ದು, ನಂತರ ಕರ್ನಾಟಕ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಬೆಂಗಳೂರು ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಘದ ಪದಾಧಿಕಾರಿಗಳು ತೀರ್ಮಾನ ಕೈಗೊಂಡಿದ್ದಾರೆ.
ಆ ನಿಮಿತ್ಯ ಸೋಮವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್, ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾರ್ಶ ಪಾಟೀಲ್ ಅವರ ನಿವಾಸಗಳ ಮುಂದೆ ಅಂಗನವಾಡಿ ನೌಕರರು ಅನಿರ್ಧಿಷ್ಟ ಧರಣಿಯನ್ನು ಆರಂಭಿಸಿದ್ದರು.
ಮಂಗಳವಾರ ಡಾ. ಅಜಯಸಿಂಗ್ ಅವರ ನಿವಾಸದ ಮುಂದೆ ಧರಣಿ ಕೈಗೊಂಡಾಗ ಅಂಗನವಾಡಿ ಶಿಕ್ಷಕಿಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದು, ನೌಕರರಲ್ಲಿ ತೀವ್ರ ಆತಂಕವನ್ನು ಹುಟ್ಟುಹಾಕಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…