ಚಿತ್ತಾಪುರ: ಭೀಮನಳ್ಳಿ ಗ್ರಾಮದಲ್ಲಿ ಮಕ್ಕಳ ವಿಶೇಷ ದಾಖಲಾತಿ ಆಂದೋಲನ

0
176
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ : ತಾಲೂಕಿನ ಭೀಮನಳ್ಳಿ ಗ್ರಾಮದಲ್ಲಿ ಅಶೋಕ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ಮಕ್ಕಳ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಖ್ಯಗುರು ಮಂಜುನಾಥ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಹೀಗಾಗಿ ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗಪ್ಪ ಜೆಡ್ಲಾರ್, ನಾಗಣ್ಣ ದಂಡೋತಿ, ವಿಶ್ವನಾಥ ಹೂಗಾರ, ಎಲ್.ಎಲ್.ಎಫ್ ಸಂಸ್ಥೆಯ ಹಿರಿಯ ಸಂಪನ್ಮೂಲ ವ್ಯಕ್ತಿ ದಿಲೀಪ್ ಕುಮಾರ್, ಬಂಗಾರಿ ಕರದಾಳ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here