ಕಲಬುರಗಿ: ನಗರದ ಜಿಮ್ಸ್ ಅಸ್ಪತ್ರೆ ಮತ್ತು ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಗೆ ಬುಧವಾರ ಗುಲಬರ್ಗಾ ದಕ್ಷಿಣ ಶಾಸಕ ಅಲ್ಲಮಪ್ರಭು ಭೇಟಿ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡುವಂತೆ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದರು.
ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಯಲ್ಲಿ ಸ್ವಚ್ಛ ನೀರು ಪೂರೈಕೆ ಇಲ್ಲದೆ ವೈದ್ಯಕೀಯ ಸೇವೆ ವ್ಯತ್ಯಯಾವಾಗುತ್ತಿರುವ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶಾಸಕರು ಜಿಮ್ಸ್ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ ಆಸ್ಪತ್ರೆ ಅಧಿಕಾರಿಗಳಿಂದ ರೋಗಿಗಳಿಗೆ ನೀಡಲಾಗುತ್ತಿರುವ ಸೆವೆ, ಉಪಚಾರದ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದೇ ಸಂಸರ್ಭದಲ್ಲಿ ಜಿಮ್ಸ್ ನಿರ್ದೇಶಕ ಡಾ.ಉಮೇಶ್ ಎಸ್.ಆರ್. ಮತ್ತು ಜಯದೇವ ಆಸ್ಪತ್ರೆಯ ವೈದ್ಯ ಡಾ.ವೀರೇಶ ಪಾಟೀಲ ಅವರಿಗೆ ಆಸ್ಪತ್ರೆಯಲ್ಲಿ ಸಕಲ ಮೂಲಸೌಕರ್ಯ ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು. ರೋಗಿಗಳಿಗೆ ನೀಡಲಾಗುವ ವೈದ್ಯಕೀಯ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…