ಬಿಸಿ ಬಿಸಿ ಸುದ್ದಿ

ನೀರು ಪೂರೈಕೆಗೂ ಯೋಗ್ಯತೆ ಇಲ್ಲದ ಸರ್ಕಾರ: ಆರ್. ಅಶೋಕ್

ಕಲಬುರಗಿ: ಸರಕಾರಿ ಆಸ್ಪತ್ರೆಗಳಲ್ಲಿ ಜೀವ ಉಳಿಸುವ ಕಾರಣಕ್ಕಾಗಿ ಕೈಗೊಳ್ಳುವ ಶಸ್ತ್ರಚಿಕಿತ್ಸೆಗೂ ನೀರು ಪೂರೈಸಲಾಗದಷ್ಟು ರಾಜ್ಯ ಸರಕಾರ ಯೋಗ್ಯತೆ ಕಳೆದುಕೊಂಡಿದೆ ಎಂದು ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಟೀಕಿಸಿದರು.

ಇಲ್ಲಿನ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗೆ ಗುರುವಾರ ಭೇಟಿ ಕೊಟ್ಟ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿಯ ಜಯದೇವ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯಲ್ಲಿ ಇದೇ ಜೂನ್ 16, 17, 18ರಂದು ಸಮರ್ಪಕವಾಗಿ ನೀರು ಪೂರೈಕೆಯಾಗದ ಕಾರಣಕ್ಕಾಗಿ ತುರ್ತು ಹೃದಯ ಶಸ್ತ್ರಚಿಕಿತ್ಸೆಗಳನ್ನು ಸಹ ಕೈಗೊಳ್ಳಲಾಗಿಲ್ಲ. ಹೃದಯದ ಸಮಸ್ಯೆ ಕಂಡುಬಂದಾಗ ಚಿಕಿತ್ಸೆಯ ದೃಷ್ಟಿಯಿಂದ ಪ್ರತಿ ಕ್ಷಣವೂ ಮುಖ್ಯ ಎನಿಸಿಕೊಳ್ಳುತ್ತದೆ. ಹೀಗಿರುವಾಗ ಈ ಮೂರು ದಿನಗಳ ಕಾಲ ತುರ್ತು ಹೃದಯ ಶಸ್ತ್ರಚಿಕಿತ್ಸೆ ಕೈಗೊಳ್ಳದೆ ಜನರ ಜೀವಗಳೊಂದಿಗೆ ಚೆಲ್ಲಾಟ ಆಡಲಾಗಿದೆ. ಆ ಮೂಲಕ ರಾಜ್ಯ ಸರಕಾರ ತನ್ನ ವೈಫಲ್ಯ ಎತ್ತಿ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.

ಇಡೀ ದೇಶದಲ್ಲಿ ಅತ್ಯಂತ ಮುಂದುವರಿದ ರಾಜ್ಯ ಎಂಬ ಹೆಸರು ಕರ್ನಾಟಕ ರಾಜ್ಯಕ್ಕಿದೆ. ಅದರಲ್ಲೂ ದೇಶ-ವಿದೇಶಗಳಿಂದ ನಮ್ಮ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಜನರು ಬರುತ್ತಾರೆ. ಹೀಗಿರುವಾಗ ಆಸ್ಪತ್ರೆಗೆ ನೀರು ಒದಗಿಸಲು ಸಹ ದುಡ್ಡು ಇಲ್ಲದಷ್ಟು ರಾಜ್ಯ ಸರಕಾರ ಪಾಪರ್ ಆಗಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರ ಬದುಕಿದೆಯೋ ಸತ್ತಿದೆಯೋ ಗೊತ್ತಿಲ್ಲದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನೀರು ಕೊಡುವ ಯೋಗ್ಯತೆಯೂ ಇಲ್ಲದಂತಾಗಿದೆ. ವಾಸ್ತವದಲ್ಲಿ ಪೇಷಂಟ್‍ಗಳ ಬದಲು ರಾಜ್ಯ ಸರ್ಕಾರವೇ ಐಸಿಯು ಸೇರಿದೆ ಎಂದು ಕುಟುಕಿದರು.

ಮುಖ್ಯಮಂತ್ರಿಗಳ ಮನೆಯಲ್ಲಿ ಕೆಂಪು ನೀರು ಬಂದ ಕಾರಣಕ್ಕಾಗಿ ಎಷ್ಟು ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೀಗಿರುವಾಗ ಕಲಬುರಗಿಯ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗೆ ಎದುರಾದ ನೀರಿನ ಸಮಸ್ಯೆ ಕುರಿತಂತೆ ಎಷ್ಟು ಮಂದಿ ಸಸ್ಪೆಂಡ್ ಆಗಿದ್ದಾರೆ? ಎಂದು ಅಶೋಕ್ ಪ್ರಶ್ನಿಸಿದರು.

ಇಷ್ಟೆಲ್ಲಾ ಪರಿಸ್ಥಿತಿ ಹದಗೆಟ್ಟಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಲೋಕನಾ ಸಭೆ ನಡೆಸಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗಂತೂ ಆಗಲೇ ಚನ್ನಪಟ್ಟಣ ಉಪಚುನಾವಣೆ ಚಿಂತೆ ಆವರಿಸಿಕೊಂಡಿದೆ. ಹಾಗಾಗಿ, ಅವರು ಚನ್ನಪಟ್ಟಣದ ಕಡೆಗೆ ಹೊರಟು ನಿಂತಿದ್ದಾರೆ ಎಂದು ಅಚ್ಚರಿ ವ್ಯಕ್ತಪಡಿಸಿದರು.

ಕಲಬುರಗಿಯ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಾದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿರ್ಲಕ್ಷ್ಯದ ಕುರಿತು ಸರ್ಕಾರ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸುವುದಲ್ಲದೆ, ಎಲ್ಲರನ್ನೂ ವಿಧಾನಸೌಧದ ಕಟಕಟೆಯಲ್ಲಿ ನಿಲ್ಲಿಸುವುದಾಗಿ ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಿ, ಮಾಜಿ ಸಚಿವ ಬಾಬುರಾವ್ ಚವ್ಹಾಣ, ಬಿಜೆಪಿ ನಾಯಕರಾದ ಶರಣಪ್ಪ ತಳವಾರ್, ಅವ್ವಣ್ಣ ಮ್ಯಾಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago