ಕಲಬುರಗಿ : ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು, ಆ ನೀರು ಕುಡಿದರೆ ಆರೋಗ್ಯ ತಪ್ಪಿ ರೋಗರುಜಿನಗಳು ಬರುತ್ತಿದು, ಕೂಡಲೇ ಈ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸಚೀನ್ ಫರಹತಾಬಾದ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಲಬುರಗಿ ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ತುಂಬಾ ತೊಂದರೆಯಗಳು ಆಗುತ್ತಿದ್ದು, ಸದರಿ ಕಲಬುರಗಿ ನಗರದ ಜೀಮ್ಸ್ ಆಸ್ಪತ್ರೆ ಹಾಗೂ ಇತರೇ ಆಸ್ಪತ್ರೆಗಳಲ್ಲಿ ನೀರು ಇಲ್ಲದೇ ರೋಗಿಗಳು, ಸಾರ್ವಜನಿಕರು ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ದಿನಪತ್ರಿಕೆಯಲ್ಲಿ ತಿಳಿದು ಬಂದಿರುತ್ತದೆ. ಹಾಗೂ ಪ್ರತಿಯೊಂದು ಕಲಬುರಗಿ ನಗರದ ಏರಿಯಾಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಎದ್ದಿರುತ್ತದೆ ಇದರಿಂದ ಅನೇಕ ರೀತಿಯ ಅವಘಡಗಳು ಸಂಭವಿಸುತ್ತಿವೆ.
ಒಂದು ವೇಳೆ ಕುಡಿಯುವ ನೀರು ಬಂದರೆ ಸಂಪೂರ್ಣವಾಗಿ ಆ ನೀರು ಮಲೀನಗೊಂಡಂತಹ ಬಣಕ್ಕೆ ತಿರುಗುತ್ತಿದ್ದು. ಇದರಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉದ್ಭವಿಸುವ ಲಕ್ಷಣಗಳು ಗೋಚರಿಸುತ್ತಿವೆ. ಆದ್ದರಿಂದ ನಮ್ಮ ವೇದಿಕೆ ವತಿಯಿಂದ ತಮ್ಮಲ್ಲಿ ಕುಡಿಯುವ ನೀರನ ವ್ಯವಸ್ಥೆಯನ್ನು ಸ್ವಚ್ಛವಾಗಿ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಈ ಮೂಲಕ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ವಿನಂತಿಸಿಕೊಳ್ಳುತ್ತೇವೆ.
ಒಂದು ವೇಳೆ ತಾವುಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ, ಸದರಿ ಕಲಬುರಗಿ ನಗರದ ಸಂಪೂರ್ಣ ಸಮಸ್ತ ನಾಗರೀಕರು ತಮ್ಮ ಕಛೇರಿಯ ಮುಂದೆ ಖಾಲಿ ಕೊಡಗಳನಿಟ್ಟು ಉಗ್ರವಾದ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಕ್ಷಯ, ನವೀನ, ಅಣವೀರ ಪಾಟೀಲ, ರವಿ ಸಜ್ಜನ್, ಬಸ್ಸು, ಅಜಯ, ಪ್ರವೀಣ ಸಿಂಧೆ, ಅಂಬು ಮಸ್ಕಿ, ಸಾಯಿಕುಮಾರ ಸಿಂಧೆ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…