ಕಲಬುರಗಿ: ಪ್ರತಿದಿನ ಯೋಗ ಮಾಡುವುದರಿಂದ ರೋಗ ಮುಕ್ತಿಯಾಗಿ ಮನುಷ್ಯನ ಆರೋಗ್ಯ ವೃದ್ಧಿಯಾಗುತ್ತದೆ ಮನುಷ್ಯನು ಸದಾ ದೈಹಿಕ ಚಟುವಟಿಕೆಗಳು ತೊಡಗಿಸಿಕೊಳ್ಳುವುದರಿಂದ ಹೃದಯಘಾತ, ಮಧುಮೇಹ ಅನೇಕ ಕಾಯಿಲೆಗಳು ಇಲ್ಲವಾಗುತ್ತವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ ಮೀನಾ ಹೇಳಿದರು.
ಗುರುವಾರದಂದು ಜಗತ್ತ್ ವೃತ್ತದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಆಯುಷ್ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಲಬುರಗಿ ಹಾಗೂ ಇತರೆ ಇಲಾಖೆಗಳು ಆಯುಷ್ ಮಹಾವಿದ್ಯಾಲಯಗಳು ಮತ್ತು ವಿವಿಧ ಯೋಗ ಸಂಘ ಸಂಸ್ಥೆಗಳು, ಕಲಬುರಗಿ ಇವರ ಸಹಭಾಗಿತ್ವದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಚಾರಣೆ ಅಂಗವಾಗಿ ಯೋಗ ನಡಿಗೆ ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜೂನ್ 21 ರಂದು ಯೋಗಾಭ್ಯಾಸ ಪ್ರಾತ್ಯಕ್ಷಿಕ ಬೆಳಿಗ್ಗೆ 6.30 ಗಂಟೆಯಿಂದ 8.30ಗಂಟೆಯವರೆಗೆ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು, ಕಾಲೇಜಿನ ಪ್ರಾಂಶುಪಾಲರು, ವಿವಿಧ ಸಂಘ ಸಂಸ್ಥೆಗಳು ಚಂದ್ರಶೇಖರ ಪಾಟೀಲ್ ಕ್ರೀಡಾಂಗಣಕ್ಕೆ ಬಂದು ಯೋಗ ಅಭ್ಯಾಸವನ್ನು ಮಾಡಬೇಕು ತಮ್ಮ ತಮ್ಮ ಶಾಲಾ ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ, ತಾಲೂಕುಗಳಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಆಯುಷ್ ಇಲಾಖೆ ಅಧಿಕಾರಿ ಡಾ. ಗಿರೀಶ ಎಸ್. ಯು. ಅವರು ಮಾತನಾಡಿದರು. ಜನರಲ್ಲಿ ಜಾಗೃತಿ ಮೂಡಿಸುವಂತಹ ಯೋಗ ಕಾರ್ಯಕ್ರಮವಾಗಿದೆ ಜನರು ಯೋಗವನ್ನು ತಮ್ಮ ಜೀವನದ ಅವಿಭಾಜ ಅಂಗವಾಗಿ ಅಳವಡಿಸಿಕೊಳ್ಳಬೇಕು ಯೋಗ ಮಾಡುವುದರಿಂದ ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದರು.
ಯೋಗ ನಡಿಗೆ ಜಾಥ ಕಾರ್ಯಕ್ರಮವು ಜಗತ್ತ್ ವೃತ್ತದಿಂದ ಪ್ರಾರಂಭವಾಗಿ ಸರ್ದಾರ ವಲಭ ಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಂದು ಮುಕ್ತಾಯವಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಡಾ. ರತಿಕಾಂತ್ ಸ್ವಾಮಿ, ಪದವಿ ಪೂರ್ವ ಶಾಲಾ ಶಿಕ್ಷಣ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಹೋಮಿಯೋಪತಿ ಮಡಿಕಲ್ ಕಾಲೇಜ್, ಹಿಂಗುಲಾಂಭಿಕಾ ಆಯುರ್ವೇದ ಆಸ್ಪತ್ರೆ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ವಿವೇಕ ಜಾಗೃತಿ ವಿದ್ಯಾಪೀಠ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಸಾರ್ವಜನಿಕರು, ಯುವಸಬಲೀಕರಣ ಕ್ರೀಡಾ ಇಲಾಖೆ ವಸತಿ ನಿಲಯದ ಯುವಕರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…