ಕಲಬುರಗಿ: ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ತುಂಬಾ ಪ್ರಮುಖವಾಗಿದೆ. ಆದರೆ ನಮ್ಮ ಯುವಕರು ಅನೇಕ ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯವಾದ ಸಮಯ ಮತ್ತು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಸೂಕ್ತವಾದ ಮಾರ್ಗದರ್ಶನ, ಸಂಸ್ಕಾರ ನೀಡಿ ಅವರನ್ನು ಅಮೂಲ್ಯವಾದ ಸಂಪತ್ತನ್ನಾಗಿಸಿ, ಅವರ ಶಕ್ತಿಯನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಂಡರೆ, ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಿದೆಯೆಂದು ರಾಜ್ಯ ಹೈಕೋರ್ಟನ ವಿಶ್ರಾಂತ ನ್ಯಾಯಾಧೀಶ ನ್ಯಾ.ಅರಳಿ ನಾಗರಾಜ ಸಲಹೆ ನೀಡಿದರು.
ಅವರು ನಗರದ ಜೇವರ್ಗಿ ಕ್ರಾಸ್ ಹತ್ತಿರವಿರುವ ’ಜ್ಞಾನ ಶಿಕ್ಷಣ ಸಂಸ್ಥೆ’ಯಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ’ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ’ ಪ್ರೇರಣೋಪನ್ಯಾಸ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿಭಿನ್ನ ಆಲೋಚನೆ, ಸಂಸ್ಕಾರ, ಮಾನವೀಯ ಮೌಲ್ಯಗಳು, ನಿರಂತರ ಅಧ್ಯಯನ, ಸತ್ಸಂಗ, ಆತ್ಮವಿಶ್ವಾಸ, ಧನಾತ್ಮಕ ಚಿಂತನೆಯಂತಹ ಗುಣಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಆಲಿಸು, ಗ್ರಹಿಸು, ಅಂಗಿಕರಿಸು, ಪಾಲಿಸು ಎಂಬ ಸೂತ್ರವನ್ನು ಅಳವಡಿಸಿಕೊಂಡರೆ ಮೇರು ವ್ಯಕ್ತಿತ್ವ ನಿಮ್ಮದಾಗುತ್ತದೆ. ನಿರ್ದಿಷ್ಟವಾದ ಗುರಿ, ಸಾಧಿಸುವ ಛಲಗಾರಿಕೆ, ಕಠಿಣ ಪರಿಶ್ರಮ, ಆತ್ಮವಿಶ್ವಾಸ, ಸಮಯದ ಸೂಕ್ತ ನಿರ್ವಹಣೆ, ಸೋಲನ್ನು ಮೆಟ್ಟಿನಿಲ್ಲುವ ಎದೆಗಾರಿಕೆಯಂತಹ ಗುಣಗಳನ್ನು ಬೆಳೆಸಿಕೊಂಡರೆ ಯಶಸ್ಸು ದೊರೆಯುತ್ತದೆಯೆಂದು ಅನೇಕ ದೃಷ್ಟಾಂತಗಳ ಮೂಲಕ ವಿವರಿಸಿದರು.
ಭೃಷ್ಟಾಚಾರ, ಜಾತಿಯತೆ, ಅಪರಾಧ, ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಸೋಲನ್ನು ಸವಾಲಾಗಿ ಸ್ವೀಕರಿಸಿ. ಸಕಾರಾತ್ಮಕ ಚಿಂತೆನೆ ನಿಮ್ಮದಾಗಿರಲಿ. ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ದೇಶದ ಅಮೂಲ್ಯವಾದ ಆಸ್ತಿ ನೀವಾಗಬೇಕು. ಆದರ್ಶ ನಾಗರಿಕರಾದರೆ ಮಾತ್ರ ಆದರ್ಶ ರಾಷ್ಟ್ರ ನಿರ್ಮಿಸಲು ಸಾಧ್ಯವಾಗಿದ್ದು, ಪರಿವರ್ತನೆಯನ್ನು ತರಲು ಯುವಕರಿಂದ ಸಾಧ್ಯವಿದೆಯೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಎಚ್.ಬಿ.ಪಾಟೀಲ, ಬಾಲ್ಯದಿಂದಲೇ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತುವ ಕಾರ್ಯ ಜರುಗಬೇಕಾದದ್ದು ಇಂದಿನ ಅಗತ್ಯವಾಗಿದೆ. ಕೇವಲ ಶಿಕ್ಷಣ ನೀಡಿದರೆ ಸಾಲದು, ಜೊತೆಗೆ ಸಂಸ್ಕಾರ, ನೈತಿಕತೆಯನ್ನು ಮೈಗೂಡಿಸಿದರೆ, ಅವರು ಮುಂದೆ ದೇಶದ ಅಮೂಲ್ಯ ಆಸ್ತಿಯಾಗಲು ಸಾಧ್ಯವಾಗುತ್ತದೆಯೆಂದರು. ಸಂಸ್ಥೆಯ ಅಧ್ಯಕ್ಷ ಸಂಗಮೇಶ ಸರಡಗಿ ಮಾತನಾಡಿ, ವಿದ್ಯಾರ್ಥಿಗಳು ಗುರು-ಹಿರಿಯರ ಮಾರ್ಗದರ್ಶನ, ಆದರ್ಶ ವ್ಯಕ್ತಿಗಳ ತತ್ವವನ್ನು ಅಳವಡಿಸಿಕೊಂಡು ಸತತವಾದ ಪ್ರಯತ್ನದೊಂದಿಗೆ ಮುನ್ನುಗ್ಗಿದ್ದರೆ ಜೀವನದಲ್ಲಿ ನಿಮಗೆ ಯಾವುದು ಅಸಾಧ್ಯವಾಗಲಾರದೆಂದು ನುಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಗೌಡೇಶ ಬಿರಾದಾರ, ಡಾ.ನೀಲಾಂಬಿಕಾ ಚೌಕಿಮಠ, ಮಧುಮತಿ ಬೇನೂರ, ವೀರೇಶ ಬೋಳಶೆಟ್ಟಿ, ಸೂರ್ಯಕಾಂತ ಸಾವಳಗಿ, ಶಿವರಾಜ ಚಿಮ್ಮಾ, ಸಂಜೀವಕುಮಾರ ಹೇರೂರ, ಮಹಾದೇವ ಗೊಬ್ಬುರ, ಮಂಜುನಾಥ ಬನ್ನೂರ, ರಾಜು, ಶ್ರೀನಿವಾಸ ಪಾಟೀಲ, ಜಾವೀದ್, ಅನುರಾಧಾ ಟಿಳ್ಳೆ, ಶ್ವೇತಾ ಪಾಟೀಲ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…