ಬಿಸಿ ಬಿಸಿ ಸುದ್ದಿ

ಶಿವಾನಂದ ಪಾಟೀಲರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಬೀರಾಳ ಆಗ್ರಹ

ಶಹಾಬಾದ :ಜಿಲ್ಲೆಯಲ್ಲಿಯೇ ಎಲ್ಲರ ಜತೆಗೆ ಒಡನಾಟವನ್ನು ಹೊಂದಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸದಾಕಾಲ ಶ್ರಮಿಸುತ್ತಿರುವ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಅವರಿಗೆ ಪಕ್ಷ ಗುರುತಿಸಿ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡರಾದ ವಿಶ್ವರಾಧ್ಯ ಬೀರಾಳ,ನಾಗಣ್ಣ ರಾಂಪೂರೆ ಆಗ್ರಹಿಸಿದ್ದಾರೆ.

ಸುಮಾರು 35 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಶಿವಾನಂದ ಪಾಟೀಲ ತಾಪಂ ಸದಸ್ಯರಾಗಿ, ಜಿಪಂ ಸದಸ್ಯರಾಗಿರುವ ಜತೆಗೆ ಜಿಪಂ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿರುವ ಎಲ್ಲಾ ಅನುಭವ ಹೊಂದಿದ್ದಾರೆ.ಅಲ್ಲದೇ ಇತ್ತಿಚಿಗಷ್ಟೇ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ ವಿರುದ್ಧ ಆರೋಗ್ಯಕರ ಪೈಪೋಟಿ ನೀಡುವ ಮೂಲಕ ಕೆಲವೇ ಅಂತರದ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ.ಆದರೆ ಎದುರಾಳಿಯವರನ್ನು ಬೆವರಿಳಿಸುವಂತೆ ಮಾಡಿದ್ದರು.

ಜಿಲ್ಲೆಯಲ್ಲಿ ಹಾಗೂ ವಿಶೇಷವಾಗಿ ಚಿತ್ತಾಪೂರ ತಾಲೂಕಿನಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.ಇತ್ತಿಚ್ಚಿನ ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಹಗಲು- ರಾತ್ರಿ ಎನ್ನದೇ ಪಕ್ಷಕ್ಕಾಗಿ ಶ್ರಮಿಸಿದ್ದಾರೆ.ಪಕ್ಷದ ಎಲ್ಲಾ ಶಾಸಕರ ಜತೆ ಉತ್ತಮ ಒಡನಾಟವನ್ನು ಹೊಂದಿದ್ದು, ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಎಲ್ಲಾ ಸಾಮಥ್ರ್ಯ ಅವರಲ್ಲಿದೆ.ಅಲ್ಲದೇ ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಭಾಂಧವ್ಯವನ್ನು ಹೊಂದಿರುವ ಇವರು ಸಾಮಾಜಿಕ ,ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಯಾವಾಗಲೂ ಬೆಂಬಲಿಸುತ್ತಾ ಬಂದಿದ್ದಾರೆ. ಈ ಭಾಗದಲ್ಲಿ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಂತೆ ಸಕ್ರೀಯವಾಗಿ ಪಾಲ್ಗೊಳ್ಳುತ್ತಾರೆ. ಇವರೊಬ್ಬ ಸಂಘಟನಾ ಚತುರ. ಆದ್ದರಿಂದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಶಿವಾನಂದ ಪಾಟೀಲ ಅವರ ಅನುಭವ, ಸಂಘಟನೆ ದೃಷ್ಟಿಯಿಂದ ಮತ್ತು ಪಕ್ಷದ ಬಲವರ್ಧನೆಗಾಗಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಅ ಅವರಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago