ಶರಣಬಸವ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

0
31

ಕಲಬುರಗಿ: 2024 ಅಂತರಾಷ್ಟ್ರೀಯ ಯೋಗ ದಿನದ 10 ನೇ ಆವೃತ್ತಿಯಾಗಿದ್ದು, ಪ್ರತಿ ವರ್ಷ ಜೂನ್ 21 ರಂದು ಇಡೀ ವಿಶ್ವವು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಒಂದುಗೂಡುತ್ತದೆ. ಇದು ಪ್ರಾಚೀನ ಭಾರತೀಯ ಯೋಗದ ಅಭ್ಯಾಸ ಮತ್ತು ದೈಹಿಕ ಹಾಗೂ ಮಾನಸಿಕ ಯೋಗಕ್ಷೇಮಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಿಸುವ ದಿನವಾಗಿದೆ. ಭಾರತೀಯ ಯೋಗವನ್ನು ಅಭ್ಯಾಸ ಮಾಡುವ ಅನೇಕ ಪ್ರಯೋಜನಗಳ ಬಗ್ಗೆ ಇಂದು ವಿಶ್ವಾದ್ಯಂತ ಜಾಗೃತಿ ಮೂಡಿಸಲಾಗುತ್ತದೆ.

ಅದರಂತೆ ಶರಣಬಸವ ವಿಶ್ವವಿದ್ಯಾಲಯದಲ್ಲಿ ಶುಕ್ರವಾರದಂದು ಅಂತರಾಷ್ಟ್ರೀಯ ಯೋಗ ದಿನ-2024 ಆಚರಿಸಲಾಯಿತು. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಸತೀಶ ಪಾಟೀಲ ಯೋಗಗಳ ವಿಧಿ ವಿಧಾನಗಳ ಬಗ್ಗೆ ಪ್ರದರ್ಶನ ನೀಡಿ, ಯೋಗ ನಮ್ಮ ಜೀವನದಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತದೆಂದು ತಿಳಿಹೇಳಿದರು. ಏಕೆಂದರೆ ಯೋಗ ನಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳನ್ನು ಒಳಗೊಂಡಿದೆ.

Contact Your\'s Advertisement; 9902492681

ಈ ಅಂತರಾಷ್ಟ್ರೀಯ ಯೋಗ ದಿನದ ಆಚರಣೆಯಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ, ನಿರ್ದೇಶಕ ಡಾ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಎಸ್. ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.

2024ರ ಅಂತರಾಷ್ಟ್ರೀಯ ಯೋಗ ದಿನದ ಥೀಮ್ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ”, ಇದು ಸ್ವಯಂ ಮತ್ತು ಒಟ್ಟಾರೆಯಾಗಿ ಸಮಾಜದ ಯೋಗಕ್ಷೇಮವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here