ಕಲಬುರಗಿ: ಡಾ. ಸರೋಜಿನಿ ಮಹಿಷಿ ಪರಿಷ್ಕøತ ವರದಿಯನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ, ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಕಲ್ಯಾಣರಾವ್ ಪಾಟೀಲ್, ರಾಜ್ಯ ಯುವ ಘಟಕ ಪ್ರಧಾನ ಸಂಚಾಲಕ ಕಿರಣ್ ಹಂಪಳ್ಳಿ, ಜಿಲ್ಲಾಧ್ಯಕ್ಷ ಆನಂದ ಎಸ್. ದೊಡ್ಡಮನಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಪ್ರವೀಣ್ ಕಟ್ಟಿಮನಿ, ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಶಿವಂ ನಾಸಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ಶ್ರೀಧರ್ ಗಂಜಿ ಸೇರಿದಂತೆ ಇನ್ನಿತರರಿದ್ದರು.