ಕಲಬುರಗಿ: ಮಕ್ಕಳು ಮಾಡುವ ಕಲೆಯಿಂದಲೇ ಜೀವನ ರೂಪಿಸಿಕೊಳ್ಳಲು ಸಹಾಯಕಾರಿಯಾಗುತ್ತದೆ. ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಮುಂದುವರೆಯಲು ಪಾಲಕರು ಮತ್ತು ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಇತ್ತೀಚೆಗೆ ಕಾಳೇ ಲೇಔಟನಲ್ಲಿರುವ ಮಹಾಲಕ್ಷ್ಮೀ ಬಡಾವಣೆಯ ಸ್ವರ ಮಾಧುರಿ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ಮತ್ತು ಗಣೇಶ ಉತ್ಸವ ಅಂಗವಾಗಿ ಹಮ್ಮಿಕೊಂಡ ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಪ್ರಶಸ್ತಿ ಪತ್ರ ವಿತರಿಸಿದ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಸ್ನಾತಕೋತ್ತರ ಸಂಗೀತ ಕೇಂದ್ರದ ಉಪನ್ಯಾಸಕರಾದ ಲಕ್ಷ್ಮೀ ಶಂಕರ ಜೋಶಿ ಮಾತನಾಡಿದರು.
ಮಕ್ಕಳು ಪಠ್ಯೆ ವಿಷಯಕ್ಕೆ ಸೀಮಿತವಾಗದೆ ಕ್ರೀಡಾ, ನೃತ್ಯ ಹಾಗೂ ಇಂತಹ ಸಂಗೀತ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕವಾಗಿ ಮಕ್ಕಳು ಶಕ್ತಿಶಾಲಿಯಾಗಿರಲು ಸಹಾಯಕವಾಗಿರುತ್ತದೆ ಎಂದು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿ.ಜಿ.ಮಹಿಳಾ ಮಹಾವಿದ್ಯಾಲಯ ಸಂಗೀತ ವಿಭಾಗದ ಮುಖ್ಯಸ್ಥರಾದ ಡಾ. ರೇಣುಕಾ ಎಚ್. ರವರು ಸ್ವಂತಹ ಹಾಡುವ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬರೆ ಅಂಕ ಗಳಿಸುವುದೇ ಮುಖ್ಯವಾಗಿದೆ. ಇದರಿಂದ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಮಕ್ಕಳಲ್ಲಿ ಹುದಗಿಕೊಂಡಿರುವ ಸಂಸ್ಕೃತಿ ಲೋಕದ ಶ್ರೀಮಂತಿಕೆ ಹೆಚ್ಚಿಸಲು ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸಲು ಇಂತಹ ಸ್ವರ ಮಾಧುರಿ ಸಂಗೀತ ವಿದ್ಯಾಲಯದಂತಹ ವೇದಿಕೆಗಳು ಹೆಚ್ಚು-ಹೆಚ್ಚು ಆಗಿ ನಿರ್ಮಾಣಗೊಂಡು ಮಕ್ಕಳಿಗೆ ಮಾನಸಿಕವಾಗಿ ಬೆಳೆಯಲು ಉತ್ತಮ ವಾತಾವರಣ ನಿರ್ಮಾಣವಾಗುವುದು ಅತ್ಯಂತ ಅವಶ್ಯಕ ಇದೆ ಎಂದು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ವಚನೋತ್ಸವ ಪ್ರತಿಷ್ಠಾನದ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ಮಾತನಾಡಿದರು.
ಎನ್.ವಿ.ಪದವಿ ಮಹಾವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥರು ಹಾಗು ಸ್ವರ ಮಾಧುರಿ ಸಂಗೀತ ವಿದ್ಯಾಲಯದ ಅಧ್ಯಕ್ಷರಾದ ಪ್ರೊ.ಮಹೇಶಕುಮಾರ ಬಡಿಗೇರ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿಗಳಾದ ಡಾ.ಸಿದ್ಧಲಿಂಗಯ್ಯ ಚೇಂಗಟಿ, ಮಹಾಲಕ್ಷ್ಮೀ ಬಡಾವಣೆಯ ಜೀರ್ಣೋದ್ಧಾರ ಸಂಘದ ಕಾರ್ಯದರ್ಶಿಗಳಾದ ರಮೇಶ ಹರವಾಳಕರ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಅಂಡಗಿ, ಶೈಲಜಾ ಸಿರಗಾಪೂರ, ಲಕ್ಷ್ಮೀ ಬಡಿಗೇರ, ಸೌಮ್ಯ ಗುಗವಾಡ, ವರುಣ ಹಾಗೂ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…